ಕೋಲ್ಕತ್ತಾ: ಜನವರಿ 16ರಿಂದ ದೇಶಾದ್ಯಂತ ಕೋವಿಡ್ ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಅದಕ್ಕೂ ಮುಂಚಿತವಾಗಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಇಂದು ಮೋದಿ ಮಹತ್ವದ ಸಭೆ ನಡೆಸಿದರು.
ಕೋವಿಡ್ ಲಸಿಕೆ ಖರೀದಿ ಒಪ್ಪಂದಕ್ಕೆ ಕೇಂದ್ರ ಈಗಾಗಲೇ ಸಹಿ ಹಾಕಿದ್ದು, ಆರಂಭದಲ್ಲಿ 11 ಮಿಲಿಯನ್ ಡೋಸ್ ವಿವಿಧ ರಾಜ್ಯಗಳಿಗೆ ರವಾನೆಯಾಗಲಿವೆ. ಇದೇ ವಿಚಾರವಾಗಿ ಮಾತನಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ನಾವು ಕೇಂದ್ರದ ಮಾರ್ಗಸೂಚಿ ಪಾಲಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: ಯುಪಿ ಸಿಎಂ ನಿಂದನೆ ಆರೋಪ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರತಿ ಬಂಧನ
ಕೋವಿಡ್ ಹಂಚಿಕೆ ವಿಚಾರದಲ್ಲಿ ಈಗಾಗಲೇ ಕೇಂದ್ರದ ಮಾರ್ಗಸೂಚಿಗಳ ಬಗ್ಗೆ ಮಮತಾ ಬ್ಯಾನರ್ಜಿ ಮಾಹಿತಿ ಪಡೆದುಕೊಂಡಿದ್ದು, ಲಸಿಕೆಗಳು ಪರಿಣಾಕಾರಿ ಎಂದು ಸಾಬೀತುಗೊಂಡರೆ ಅದರ ಬಗ್ಗೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲಿಸಲು ಸಿದ್ಧ ಎಂದಿದ್ದಾರೆ.
ಕೋವಿಡ್ ಲಸಿಕೆಯಿಂದ ಯಾವುದಾದ್ರೂ ಅಡ್ಡಪರಿಣಾಮಗಳು, ಬೆಲೆಯ ಬಗ್ಗೆ ಅವರು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.