ಕೋಲ್ಕತ್ತಾ (ಪಶ್ಚಿಮ ಬಂಗಾಳ): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಭಾಗಿಯಾಗುತ್ತಿಲ್ಲ. ಬದಲಿಗೆ ಮಮತಾ ಅವರ ಪ್ರತಿನಿಧಿಯಾಗಿ ಪಕ್ಷದ ನಾಯಕ ಕಾಕೋಲಿ ಘೋಷ್ ದಸ್ತಿದಾರ್ ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆ ಬಹುಮತ ಪಡೆದಿರುವ ಕಾಂಗ್ರೆಸ್ ಶನಿವಾರ ತನ್ನ ಸರ್ಕಾರ ರಚಿಸಲಿದೆ. ನೂತನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಹಲವು ಸಚಿವರು ಪದಗ್ರಹಣ ಮಾಡಲಿದ್ದಾರೆ. ಬಿಜೆಪಿ ಆಡಳಿತೇತರ ಪ್ರಮುಖ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದರು. ಆದರೆ, ಮಮತಾ ಸಮಾರಂಭಕ್ಕೆ ಗೈರಾಗಲಿದ್ದಾರೆ.
ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಡೆರೆಕ್ ಓಬ್ರಿಯಾನ್ ಟ್ವೀಟ್ ಮಾಡಿದ್ದು, ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಇತರ ಸಹೋದ್ಯೋಗಿಗಳ ನಾಳೆ ಪ್ರಮಾಣ ವಚನ ಸ್ವೀಕಾರಕ್ಕೆ ಟಿಎಂಸಿ ಅಧ್ಯಕ್ಷೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ವೈಯಕ್ತಿಕವಾಗಿ ಆಹ್ವಾನ ನೀಡಲಾಗಿದೆ. ನಿಯೋಜಿತ ಸಿಎಂ ಅವರಿಗೆ ಮಮತಾ ತಮ್ಮ ಶುಭಾಶಯ ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸಲು ಲೋಕಸಭೆಯಲ್ಲಿ ಟಿಎಂಸಿ ಪಕ್ಷದ ಉಪ ನಾಯಕರಾದ ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ನೇಮಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
-
The CM designate of Karnataka Mr Siddaramaiah & his other colleagues called to personally invite @AITCofficial Chairperson & Bengal CM Mamata Banerjee for swearing-in tomorrow
— Derek O'Brien | ডেরেক ও'ব্রায়েন (@derekobrienmp) May 19, 2023 " class="align-text-top noRightClick twitterSection" data="
She conveyed her best wishes & designated @kakoligdastidar #TMC Deputy Leader in LS to attend ceremony
">The CM designate of Karnataka Mr Siddaramaiah & his other colleagues called to personally invite @AITCofficial Chairperson & Bengal CM Mamata Banerjee for swearing-in tomorrow
— Derek O'Brien | ডেরেক ও'ব্রায়েন (@derekobrienmp) May 19, 2023
She conveyed her best wishes & designated @kakoligdastidar #TMC Deputy Leader in LS to attend ceremonyThe CM designate of Karnataka Mr Siddaramaiah & his other colleagues called to personally invite @AITCofficial Chairperson & Bengal CM Mamata Banerjee for swearing-in tomorrow
— Derek O'Brien | ডেরেক ও'ব্রায়েন (@derekobrienmp) May 19, 2023
She conveyed her best wishes & designated @kakoligdastidar #TMC Deputy Leader in LS to attend ceremony
ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಹಾಗೂ ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಪುದುಚೇರಿ ಸಿಎಂ ರಂಗಸ್ವಾಮಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಅದರಲ್ಲೂ ಮಮತಾ ಉಪಸ್ಥಿತಿಯು ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಣಾಯಕವೆಂದು ಪರಿಗಣಿಸಲಾಗಿತ್ತು.
ಅದರಲ್ಲೂ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಇತ್ತೀಚೆಗೆ ಮಮತಾ ಘೋಷಿಸಿದ್ದರು. ಕಾಂಗ್ರೆಸ್ ಎಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ. ನಾವು ಅವರಿಗೆ ಬೆಂಬಲ ನೀಡುತ್ತೇವೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅವರು ಇತರ ರಾಜಕೀಯ ಪಕ್ಷಗಳನ್ನು ಬೆಂಬಲಿಸಬೇಕೆಂದು ತಿಳಿಸಿದ್ದರು. ಬಿಜೆಪಿ ಆಳಿಡಳಿವಿದ್ದ ಕರ್ನಾಟಕದಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದ ಗೆಲುವು ಸಾಧಿಸಿದ ಬೆನ್ನಲ್ಲೇ ಅವರು ಹೇಳಿಕೆ ನೀಡಿದ್ದರು. ಮೇ 10 ರಂದು ಪ್ರಕಟವಾದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ 224 ಸ್ಥಾನಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಸರಳ ಬಹುಮತ ಪಡೆದಿದೆ. ಆಡಳಿತಾರೂಢ ಬಿಜೆಪಿ 66 ಸ್ಥಾನಗಳಿಗೆ ಕುಸಿದು ಅಧಿಕಾರ ಕಳೆದುಕೊಂಡಿತ್ತು.
ಇದನ್ನೂ ಓದಿ: ಸಿಎಂ ಪದಗ್ರಹಣ: ಯಾರೆಲ್ಲಾ ಭಾಗಿ? ಇಲ್ಲಿದೆ ಗಣ್ಯರ ಪಟ್ಟಿ