ETV Bharat / bharat

'ಬಿಜೆಪಿ ವಿರುದ್ಧ ಒಂದಾಗಿ': ರಾಷ್ಟ್ರ ನಾಯಕರಿಗೆ ಮಮತಾ ಬ್ಯಾನರ್ಜಿ ಪತ್ರ - ತನಿಖಾ ಸಂಸ್ಥೆಗಳ ದುರ್ಬಳಕೆ

ರಾಜ್ಯ ಸರ್ಕಾರಗಳ ಅಧಿಕಾರವನ್ನು ದುರ್ಬಲಗೊಳಿಸಿ, ಸರ್ವಾಧಿಕಾರವನ್ನು ದೇಶದಲ್ಲಿ ಸ್ಥಾಪಿಸಲು ಬಿಜೆಪಿ ಬಯಸಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಬಿಜೆಪಿಯೇತರ ಪಕ್ಷಗಳ ಮುಖಂಡರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Mamata urges Opposition to unite to 'save' democracy
ಮಮತಾ ಬ್ಯಾನರ್ಜಿ
author img

By

Published : Mar 31, 2021, 6:58 PM IST

ಕೋಲ್ಕತಾ, ಪಶ್ಚಿಮ ಬಂಗಾಳ: ವಿಧಾನಸಭಾ ಚುನಾವಣೆಯ ಪಶ್ಚಿಮ ಬಂಗಾಳದಲ್ಲಿ ರಂಗೇರಿದೆ. ಇದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿಯೇತರ ಪ್ರಮುಖ ನಾಯಕರಿಗೆ ಪತ್ರ ಬರೆದಿದ್ದಾರೆ.

Mamata urges Opposition to unite to 'save' democracy
ಮಮತಾ ಬ್ಯಾನರ್ಜಿ ಬರೆದಿರುವ ಪತ್ರ

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಡಿಎಂಕೆ ಪಕ್ಷದ ಸ್ಟ್ಯಾಲಿನ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ, ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್, ತೆಲಂಗಾಣ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಮತ್ತು ರಾಷ್ಟ್ರೀಯ ಜನತಾದಳದ ತೇಜಸ್ವಿ ಯಾದವ್, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಸಿಪಿಐಎಂಎಲ್‌ನ ದೀಪಂಕರ್ ಭಟ್ಟಾಚಾರ್ಯ ಮತ್ತು ಸಮಾಜವಾದಿ ಪಕ್ಷಕ್ಕೆ ಪತ್ರ ಬರೆದಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಬಿಜೆಪಿ ದಾಳಿ ನಡೆಸುತ್ತಿದ್ದು, ಇದೆಲ್ಲದರ ವಿರುದ್ ಹೋರಾಡಬೇಕಿದೆ. ದೇಶದ ಜನರಿಗೆ ವಿಶ್ವಾಸಾರ್ಹ ಪರ್ಯಾಯವನ್ನು ನೀಡಬೇಕಾದ ಸಮಯ ಬಂದಿದೆ ಎಂಬ ಅಂಶಗಳನ್ನು ಒಳಗೊಂಡಿರುವ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ: 'ನನ್ನ ಮೇಲೆ ಹಲ್ಲೆ ನಡೆಸಿದವರ ಫೋಟೋಗಳು, ವಿಡಿಯೋಗಳಿವೆ, ಆದರೆ..'

ಬಿಜೆಪಿ ಅಲ್ಲದ ಪಕ್ಷಗಳು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಚಲಾಯಿಸದಂತಿರಲು ಬಿಜೆಪಿ ಬಯಸಿದೆ. ಇದು ರಾಜ್ಯ ಸರ್ಕಾರಗಳ ಅಧಿಕಾರವನ್ನು ದುರ್ಬಲಗೊಳಿಸಲು ಮತ್ತು ಅವುಗಳನ್ನು ಕೇವಲ ಪುರಸಭೆಗಳಿಗೆ ಇಳಿಸಲು ಬಯಸಿದೆ. ಬಿಜೆಪಿ ಸರ್ವಾಧಿಕಾರವನ್ನು ದೇಶದಲ್ಲಿ ಸ್ಥಾಪಿಸಲು ಬಯಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್​ಗಳಿಗೆ ಹೆಚ್ಚಿನ ಅಧಿಕಾರ ನೀಡುವ ವಿವಾದಾತ್ಮಕ ಕಾಯ್ದೆಯನ್ನು ಜಾರಿಗೊಳಿಸಲಾಗಿದ್ದು, ಈ ಮೂಲಕ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ಸರ್ಕಾರದ ಮೇಲೆ ಬಿಜೆಪಿ ಆಕ್ರಮಣ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ಕಚೇರಿಯ ದುರುಪಯೋಗ, ಸಿಬಿಐ-ಜಾರಿ ನಿರ್ದೇಶನಾಲಯಗಳಂತಹ ತನಿಖಾ ಸಂಸ್ಥೆಗಳ ದುರ್ಬಳಕೆ, ರಾಜ್ಯಗಳಿಗೆ ಸೇರಬೇಕಾದ ಹಣವನ್ನು ತಡೆಹಿಡಿಯುವುದು, ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಮತ್ತು ಯೋಜನಾ ಆಯೋಗಗಳ ವಿಸರ್ಜನೆ, ಬಿಜೆಪಿಯೇತರ ಸರ್ಕಾರಗಳ ಉರುಳಿಸಲು ಯತ್ನ, ಸರ್ಕಾರಿ ಸ್ವತ್ತುಗಳ ಖಾಸಗೀಕರಣ ಮುಂತಾದ ಅಂಶಗಳನ್ನು ಉಲ್ಲೇಖಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.