ಮಚಲೀಪಟ್ಟಣ( ಆಂಧ್ರಪ್ರದೇಶ): ದೇಶದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ಸರಣಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಗಳಿಂದ ಬೆಚ್ಚಿ ಬಿದ್ದಿದೆ. ಕಿರಾತಕನೊಬ್ಬ ಮಹಿಳೆಯೊಂದಿಗೆ ಸಹಬಾಳ್ವೆ ನಡೆಸಿ ಆಕೆಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆತನಿಂದ ಅತ್ಯಾಚಾರಕ್ಕೊಳಗಾದ ಬಾಲಕಿ ಈಗ ಮಗುವಿಗೆ ಜನ್ಮ ನೀಡಿದ್ದಾಳೆ.
ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮಚಲಿಪಟ್ಟಣದಲ್ಲಿ ಇಂತಹದ್ದೊಂದು ಅಮಾನವೀಯ ಘಟನೆ ನಡೆದಿದೆ. ಮಹಿಳೆಯೊಂದಿಗೆ ಸಹಬಾಳ್ವೆ ನಡೆಸುತ್ತಿದ್ದ ಆರೋಪಿಯೇ ಆಕೆಯ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ತಂದೆಯ ಸ್ಥಾನದಲ್ಲಿರುವ ವ್ಯಕ್ತಿ ಹತ್ತು ತಿಂಗಳಿನಿಂದ ಬಾಲಕಿಯ ಮೇಲೆ ನಿರಂತರವಾಗಿ ಲೈಗಿಂಕ ದೌರ್ಜನ್ಯ ಎಸೆಗಿದ್ದಾನೆ.
ತಂದೆಯ ಸ್ಥಾನದಲ್ಲಿದ್ದವನ ಈ ಪೈಶಾಚಿಕ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ಕೂಡಾ ನೀಡಿದ್ದಾಳೆ. ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಚಿಲಕಲಪುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.