ETV Bharat / bharat

ಯುಪಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಆತ್ಮಹತ್ಯೆ - ಈಟಿವಿ ಭಾರತ ಕನ್ನಡ

ಯುಪಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

man-committed-suicide-in-tilak-nagar-due-to-work-stress
ಯುಪಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಆತ್ಮಹತ್ಯೆ
author img

By

Published : Feb 21, 2023, 9:44 PM IST

ಮುಂಬೈ : ಉತ್ತರಪ್ರದೇಶ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ತಿಲಕ್​ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿಮಲೇಶ್​​ ಕುಮಾರ್​ ಬನಾರಸಿ ದಾಸ್​​ ಓಡಿಚ್ಚ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.

ಘಟನೆ ಸಂಬಂಧ ಮಾಹಿತಿ ನೀಡಿದ ಪೊಲೀಸ್​ ಅಧಿಕಾರಿ ಸುನೀಲ್​ ಕಾಳೆ, ಇಂದು ಬೆಳಿಗ್ಗೆ 8.15 ರ ಸುಮಾರಿಗೆ ತಾರಾ ಗಗನ್​ ಹೌಸಿಂಗ್​​ ಸೊಸೈಟಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಮಲೇಶ್​​ ಕುಮಾರ್​ ಬನಾರಸಿ ದಾಸ್​​ ಓಡಿಚ್ಚ ಎಂದು ಗುರುತಿಸಲಾಗಿದೆ. ಇವರು ತಾರಾ ಗಗನ್​ ಹೌಸಿಂಗ್​ ಸೊಸೈಟಿಯ 95ನೇ ಕಟ್ಟಡದ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆದಾಗಲೇ ವಿಮಲೇಶ್​​ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮೃತ ವಿಮಲೇಶ್​ ಪತ್ನಿ ರಮಾ, ನನ್ನ ಪತಿ ಎಂಜಿನಿಯರಿಂಗ್ ಓದಿದ್ದಾರೆ. ಅವರು ಉತ್ತರ ಪ್ರದೇಶ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರ ಕಚೇರಿಯು ಮುಂಬೈನ ವರ್ಲ್ಡ್ ಟ್ರೇಡ್ ಸೆಂಟರ್ ನಲ್ಲಿತ್ತು. 2022 ರಿಂದ ಲಕ್ನೋದ ಮುಖ್ಯ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಈ ಸ್ಥಳದಲ್ಲಿ ಕೆಲಸದ ಒತ್ತಡ ಹಾಗೂ ಮನೆಯಿಂದ ದೂರ ಉಳಿಯಬೇಕಾಗಿ ಬಂದಿದ್ದರಿಂದ ಎರಡು ತಿಂಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ನಂತರ, ಅವರನ್ನು ಮಾರ್ಚ್ 31 ರವರೆಗೆ ಕೆಲಸ ಮಾಡಲು ಉತ್ತರ ಪ್ರದೇಶ ಪ್ರವಾಸೋದ್ಯಮದಿಂದ ಕೇಳಿತ್ತು. ಈ ಮಧ್ಯೆ ಕೆಲಸದ ಒತ್ತಡದಿಂದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ತೆಲಂಗಾಣದಲ್ಲಿ ತಾಯಿ ಆತ್ಮಹತ್ಯೆ: ತೆಲಂಗಾಣದ ಅಲ್ವಾಲ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಹಿಂದೆ ಹುಟ್ಟಿದ ಶಿಶುಗಳ ಸಾವಿನಿಂದ ಮನನೊಂದ ಮಹಿಳೆಯೊಬ್ಬರು ಅವಳಿ ಶಿಶುಗಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ನರಸಿಂಗ ರಾವ್ ಎಂಬವರ ಪತ್ನಿ ಸಂಧ್ಯಾ ರಾಣಿ (29) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ರಾತ್ರಿ ಪತಿ ಗಾಢನಿದ್ದೆಯಲ್ಲಿದ್ದಾಗ ಪತ್ನಿ ಸಂಧ್ಯಾರಾಣಿ ಮನೆ ಆವರಣದಲ್ಲಿದ್ದ ನೀರಿನ ತೊಟ್ಟಿಗೆ ಶಿಶುಗಳನ್ನು ಎಸೆದು, ನಂತರ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಎಂದಿನಂತೆ ಬೆಳಗ್ಗೆ ಎದ್ದು ನೋಡಿದಾಗ ಪತ್ನಿ ಮತ್ತು ಮಕ್ಕಳು ಕಾಣದಿರುವುದನ್ನು ಕಂಡು ಆತಂಕಗೊಂಡಿದ್ದಾರೆ.ಈ ವೇಳೆ ಮನೆಯ ಆವರಣದಲ್ಲಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ನೀರಿನ ತೊಟ್ಟಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಶಿಶುಗಳ ಆರೋಗ್ಯ ಸ್ಥಿತಿ ನನ್ನನ್ನು ತೀವ್ರವಾಗಿ ಕಾಡುತ್ತಿದೆ ಮಹಿಳೆ ಬರೆದಿರುವ ಡೆತ್​ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆನೆ ದಾಳಿ ಭೀತಿ: ಮುನ್ನೆಚ್ಚರಿಕೆಯಾಗಿ ನಿಷೇಧಾಜ್ಞೆ ಜಾರಿ..14 ಜನರ ಜೀವ ಬಲಿ ಪಡೆದ ಮದಗಜ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.