ETV Bharat / bharat

ವರ್ಷಗಳ ಕಾಲ ಮಗಳ ಮೇಲೆ ಅತ್ಯಾಚಾರ: ಕಾಮುಕ ತಂದೆಯ ಬಂಧನ

author img

By

Published : Jan 17, 2022, 7:19 PM IST

ಕಳೆದ ಒಂದು ವರ್ಷದಿಂದ ಕುಡಿದ ಅಮಲಿನಲ್ಲಿ ಹೆತ್ತ ಮಗಳ ಮೇಲೆ ಕಾಮುಕ ತಂದೆಯೋರ್ವ ಅತ್ಯಾಚಾರವೆಸಗಿರುವ ಘಟನೆ ಉದಯ್​ಪುರದಲ್ಲಿ ನಡೆದಿದ್ದು, ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

Father rapes daughter
Father rapes daughter

ಉದಯ್‌ಪುರ(ರಾಜಸ್ಥಾನ): ಆಘಾತಕಾರಿ ಘಟನೆವೊಂದರಲ್ಲಿ ಕಳೆದ ಒಂದು ವರ್ಷದಿಂದ ಅಪ್ರಾಪ್ತ ಮಗಳ ಮೇಲೆ ಕಾಮುಕ ತಂದೆ ಅತ್ಯಾಚಾರವೆಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಆರೋಪಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜಸ್ಥಾನದ ಉದಯ್​ಪುರದಲ್ಲಿ ಈ ಪ್ರಕರಣ ನಡೆದಿದೆ. ಸಂತ್ರಸ್ತ ಬಾಲಕಿ ತಾಯಿ ಮುಂದೆ ತಂದೆಯ ದೌರ್ಜನ್ಯವನ್ನು ತಿಳಿಸಿದ್ದಳು. ಇದರ ಬೆನ್ನಲ್ಲೇ ಮದ್ಯಪಾನ ವ್ಯಸನಿಯಾಗಿದ್ದ ತಂದೆಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಯ ಬಂಧನ ಮಾಡುವಲ್ಲಿ ಲಸಾಡಿಯಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮದ್ಯದ ಅಮಲಿನಲ್ಲಿ ಇದ್ದಾಗಲೆಲ್ಲಾ ಮನೆಯಲ್ಲಿ ಏಕಾಂಗಿಯಾಗಿರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬೇರೆಯವರಿಗೆ ಮಾಹಿತಿ ನೀಡಿದ್ರೆ, ಕೊಲೆ ಮಾಡುವ ಬೆದರಿಕೆ ಸಹ ಹಾಕಿದ್ದನೆಂದು ಎಂದು ಬಾಲಕಿ ತಿಳಿಸಿದ್ದಾಳೆ.

ಇದನ್ನೂ ಓದಿ: 'ಮಾರ್ಚ್​ ತಿಂಗಳಲ್ಲಿ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ವ್ಯಾಕ್ಸಿನ್​​'

ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಶೋಧಕಾರ್ಯ ನಡೆಸಿ, ಆತನ ಬಂಧನ ಮಾಡಿದ್ದಾರೆ. ಆರೋಪಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.