ETV Bharat / bharat

ನೀರಿನ ಸುಳಿಯಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ವ್ಯಕ್ತಿ!

ಕಾಲುವೆಯಲ್ಲಿ ಈಜಲು ಹೋಗಿ ಇದ್ದಕ್ಕಿಂದ್ದಂತೆ ಸುಳಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ನೀರಿನ ಸುಳಿಯಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಪ್ರಾಣಬಿಟ್ಟ ವ್ಯಕ್ತಿ

author img

By

Published : Oct 8, 2021, 3:58 PM IST

ಅನಂತಪುರ (ಆಂಧ್ರಪ್ರದೇಶ): ನೀರಿನ ಸುಳಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಪೆದ್ದವಾಡುಗೂರು ಮಂಡಲದ ಬಾಂಧರಪಲ್ಲಿ ಗ್ರಾಮದಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಬ್ಬರು ಕಾಲುವೆಯಲ್ಲಿ ಈಜಲು ಹೋಗಿದ್ದರು. ಈಜುವ ವೇಳೆ ಇದ್ದಕ್ಕಿಂದ್ದಂತೆ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಯುವಕನ ಕೊಲೆಗೈದ 10 ಆರೋಪಿಗಳ ಬಂಧನ.. ಮಗಳನ್ನ ಪ್ರೀತಿಸಿದ್ದಕ್ಕೆ ಸುಪಾರಿ ಕೊಟ್ಟ ತಂದೆ..

ಕಾಲುವೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಹನುಮಂತ ರೆಡ್ಡಿ (34) ಎಂಬವರು ಇದನ್ನು ಗಮನಿಸಿದ್ದು, ಮಕ್ಕಳನ್ನು ರಕ್ಷಿಸಲು ಕಾಲುವೆಗೆ ಹಾರಿದ್ದಾರೆ. ಆ ಮಕ್ಕಳಿಬ್ಬರನ್ನು ರಕ್ಷಿಸುವಲ್ಲಿ ಹನುಮಂತ ರೆಡ್ಡಿ ಯಶಸ್ವಿಯಾದರಾದರೂ ಸುಳಿಯಲ್ಲಿ ಸಿಲುಕಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಹನುಮಂತ ರೆಡ್ಡಿ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಭಾರತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.