ETV Bharat / bharat

ತಾಯಿ - ಪತ್ನಿ ನಡುವೆ ಜಗಳ: ಮನನೊಂದು 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ - ಮೊರಾದಾಬಾದ್‌ನ ಪಖ್ವಾರಾ ಪ್ರದೇಶ

ಮೊರಾದಾಬಾದ್‌ನ ಪಖ್ವಾರಾ ಪ್ರದೇಶದ ವಸತಿ ಕಟ್ಟಡವೊಂದರ ಐದನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

died
died
author img

By

Published : Feb 24, 2021, 1:04 PM IST

ಮೊರಾದಾಬಾದ್(ಉತ್ತರಪ್ರದೇಶ): ತಾಯಿ ಮತ್ತು ಪತ್ನಿ ನಡುವಿನ ಜಗಳದಿಂದ ಬೇಸತ್ತು ವ್ಯಕ್ತಿಯೊಬ್ಬ ವಸತಿ ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೊರಾದಾಬಾದ್‌ನ ಪಖ್ವಾರಾ ಪ್ರದೇಶದಲ್ಲಿ ನಡೆದಿದೆ.

ಸಚಿನ್ ಸೈನಿ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸೋಮವಾರ ರಾತ್ರಿ ವೇಳೆ ತಾಯಿ ಮತ್ತು ಪತ್ನಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸಚಿನ್​ ಜಗಳ ಬಿಡಿಸಲು ಪ್ರಯತ್ನಿಸಿದ್ದಾನೆ. ಪದೇ ಪದೆ ಕುಟುಂಬದಲ್ಲಿ ಜಗಳವಾಗುತ್ತಿದ್ದ ಹಿನ್ನೆಲೆ ಮನನೊಂದು ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡ ಸಚಿನ್ ಸೈನಿಯನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ವ್ಯಕ್ತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.