ಮುಜಫರ್ನಗರ (ಉತ್ತರ ಪ್ರದೇಶ): ಮುಜಫರ್ನಗರ ಜಿಲ್ಲೆಯಲ್ಲಿ ಶನಿವಾರ ಸಂಜೆ 35 ವರ್ಷದ ವ್ಯಕ್ತಿವೋರ್ವ ಗಂಟಲು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ 28 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಬಿನ್ ಎಂಬಾತ ಕೊಲೆಗೀಡಾಗಿರುವ ವ್ಯಕ್ತಿ. ರಾಬಿನ್ ಆರೋಪಿಯ ಪತ್ನಿಯೊಂದಿಗೆ ವಿವಾಹೇತರ ಸಂಬಂಧವನ್ನು ಹೊಂದಿದ್ದ ಮತ್ತು ದೂರವಾಣಿಯಲ್ಲಿ ಕಿರುಕುಳ ನೀಡಿದ್ದನಂತೆ. ಈ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ರಾಬಿನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.