ತ್ರಿಶೂರ್(ಕೇರಳ): ಕಂಠಪೂರ್ತಿ ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತನ್ನ ವೃದ್ಧ ಪೋಷಕರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್ದಲ್ಲಿನ ಅವಿನಿಸೇರಿ ಎಂಬಲ್ಲಿ ನಡೆದಿದೆ. ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರದೀಪ್ ಎಂಬ ವ್ಯಕ್ತಿ ಮದ್ಯಪಾನ ಮಾಡಿ ಮನೆಗೆ ಆಗಮಿಸಿದ್ದು, ಈ ವೇಳೆ ಕೊಡಲಿಯಿಂದ ತಂದೆ-ತಾಯಿ ಮೇಲೆ ಹಲ್ಲೆ ಮಾಡಿದ್ದ. ಹೀಗಾಗಿ ಗಂಭೀರವಾಗಿ ಗಾಯಗೊಳಿಸಿದ್ದ ವೃದ್ಧ ದಂಪತಿಯನ್ನು ತಕ್ಷಣವೇ ತ್ರಿಶೂರ್ದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತ್ರಿಶೂರ್ ಮೆಡಿಕಲ್ ಕಾಲೇಜ್ಗೆ ಕರೆದೊಯ್ಯುವಂತೆ ಅಲ್ಲಿನ ವೈದ್ಯರು ಸೂಚನೆ ನೀಡಿದ್ದಾರೆ. ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ಮಂಗಳವಾರ ರಾತ್ರಿ ತಂದೆಕರುತೇದತ್ ರಾಮಕೃಷ್ಣನ್ (75), ಹಾಗೂ ಇಂದು ಬೆಳಗ್ಗೆ ತಾಯಿ ತಂಕಮಣಿ (70) ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿರಿ: ಪಿಹೆಚ್ಡಿ, ಸ್ನಾತಕೋತ್ತರ ಪದವಿಗಳಿಗೆ ಯಾವುದೇ ಬೆಲೆ ಇಲ್ಲ : ತಾಲಿಬಾನ್ ಶಿಕ್ಷಣ ಸಚಿವ
ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೋಸ್ಕರ ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ಮದ್ಯಪಾನ ಮಾಡುತ್ತಿದ್ದ ಪ್ರದೀಪ್, ಮನೆಯಲ್ಲಿ ಮೇಲಿಂದ ಮೇಲೆ ಜಗಳವಾಡುತ್ತಿದ್ದನು. ಅದೇ ಕಾರಣಕ್ಕಾಗಿ ಕಟ್ಟಿಕೊಂಡ ಹೆಂಡತಿ ಕೂಡ ತನ್ನ ಮಗಳೊಂದಿಗೆ ತವರು ಮನೆಯಲ್ಲಿ ವಾಸವಾಗಿದ್ದಾಳೆ.