ETV Bharat / bharat

ಬೈಕ್‌ನಲ್ಲಿ ಸಂಚರಿಸುವಾಗ ಕುತ್ತಿಗೆಗೆ ಸಿಲುಕಿದ ಗಾಳಿಪಟ ದಾರ, ವ್ಯಕ್ತಿ ಸಾವು - ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಸಾವು

ದೆಹಲಿಯ ಹೈದರ್‌ಪುರ ಮೇಲ್ಸೇತುವೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

Man dies as throat slit by kite string
ಸಾಂದರ್ಭಿಕ ಚಿತ್ರ
author img

By

Published : Jul 27, 2022, 9:51 AM IST

ನವದೆಹಲಿ: ವಾಯುವ್ಯ ದೆಹಲಿಯ ಮೌರ್ಯ ಎನ್‌ಕ್ಲೇವ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಗಾಳಿಪಟದ ದಾರದಿಂದ ಕತ್ತು ಸೀಳಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. ಆವಂತಿಕಾದ ರೋಹಿಣಿ ಸೆಕ್ಟರ್-3ರ ನಿವಾಸಿ ಸುಮಿತ್ ರಂಗಾ ಮೃತರು.

ಹಾರ್ಡ್‌ವೇರ್ ಅಂಗಡಿಯ ಮಾಲೀಕ ರಂಗಾ ಅವರು ಹೈದರ್‌ಪುರ ಫ್ಲೈಓವರ್‌ನಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೌರ್ಯ ಎನ್‌ಕ್ಲೇವ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 304 A (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; 2 ವಾರದಲ್ಲಿ ಇದು 4ನೇ ಘಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.