ಚೆನ್ನೈ: ತಾನು ಪ್ರೀತಿ ಮಾಡುತ್ತಿದ್ದ ಯುವತಿ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡ ಯುವಕ, ಯುವತಿ ಹಾಗೂ ಆಕೆಯ ತಾಯಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಕೋರುಕ್ಕುಪೇಟೆಯಲ್ಲಿ ಈ ಘಟನೆ ನಡೆದಿದ್ದು, ತಾನು ಪ್ರೀತಿ ಮಾಡುತ್ತಿದ್ದ ಯುವತಿ ಇನ್ನೊಬ್ಬನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ಅವರ ಮನೆಗೆ ತೆರಳಿ ಗೆಳತಿ ಹಾಗೂ ಆಕೆಯ ತಾಯಿ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಿದ್ದು, ತದನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಓದಿ: ಕಮಾಂಡೆಂಟ್ನ ಮಗ, ಅತ್ತೆ, ತಾಯಿ ಮೇಲೆ ಹಲ್ಲೆ ಮಾಡಿ ಕೆಲಸದಾಕೆ ಆತ್ಮಹತ್ಯೆ!
ಸತೀಶ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು. ಕಳೆದ 7 ವರ್ಷಗಳಿಂದ ಅದೇ ಪ್ರದೇಶದ ರಂಜಿತಾ ಎಂಬ ಯುವತಿಯನ್ನ ಪ್ರೀತಿಸುತ್ತಿದ್ದನು. ಇದಕ್ಕೆ ಯುವತಿ ತಾಯಿ ವೆಂಕಟಮ್ಮಾಳ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕಾಗಿ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಕೋಪಗೊಂಡು ಸತೀಶ್ ಅವರೊಂದಿಗೆ ವಾಗ್ವಾದ ನಡೆಸಿ ಕೃತ್ಯವೆಸಗಿದ್ದಾನೆ.
ಸೀಮೆಎಣ್ಣೆ ತನ್ನ ಮೇಲೂ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಅವರ ಕಿರುಚಾಟ ಕೇಳಿ ಸ್ಥಳೀಯರು ಅಲ್ಲಿಗೆ ಬರುವ ಹೊತ್ತಿಗೆ ಮೂವರು ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.