ಗಾಜಿಯಾಬಾದ್(ಉತ್ತರ ಪ್ರದೇಶ): ಮದುವೆ ಕಾರ್ಯಕ್ರಮವೊಂದರಲ್ಲಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅವುಗಳನ್ನ ಲಟ್ಟಿಸಿದ ನಂತರ ಉಗುಳಿ ಬೇಯಿಸುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ವ್ಯಕ್ತಿಯ ಬಂಧನ ಮಾಡಲಾಗಿದೆ.
ಉತ್ತರ ಪ್ರದೇಶ ಗಾಜಿಯಾಬಾದ್ನಲ್ಲಿ ಈ ಘಟನೆ ನಡೆದಿದ್ದು, ಮದುವೆ ಕಾರ್ಯಕ್ರಮದಲ್ಲಿ ರೊಟ್ಟಿ ಲಟ್ಟಿಸುತ್ತಿದ್ದ ವ್ಯಕ್ತಿ ಅವುಗಳಲ್ಲಿ ಉಗುಳಿ ತದನಂತರ ಬೇಯಿಸಲು ಇಡುತ್ತಿದ್ದನು. ಇದರ ದೃಶ್ಯವನ್ನ ಸ್ಥಳೀಯ ವ್ಯಕ್ತಿಯೊಬ್ಬ ಮೊಬೈಲ್ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದರು. ಇದೀಗ ಆತನ ಬಂಧನ ಮಾಡಲಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಆತನ ಬಂಧನ ಮಾಡುವಂತೆ ಎಲ್ಲೆಡೆಯಿಂದ ಕೂಗು ಕೇಳಿ ಬಂದಿತ್ತು. ಬಂಧಿತ ವ್ಯಕ್ತಿಯನ್ನ ಸೊಹೈಲ್ ಎಂದು ಗುರುತಿಸಲಾಗಿದೆ.