ಮುಂಬೈ : ದುಬಾರಿ ಕಾರಿನಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಜೋಗೇಶ್ವರಿಯ ನಿವಾಸಿ ಇಬ್ರಾಹಿಂ ಮುಜಾವರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಆರೋಪಿಯಿಂದ 100 ಗ್ರಾಂ ಎಂಡಿ ನಿಷೇಧಿತ ಡ್ರಗ್ಸ್ ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಮುಜಾವರ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮತ್ತು ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆತ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.