ನವದೆಹಲಿ: ಸುಪ್ರೀಂಕೋರ್ಟ್ ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಇಂದು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಆಗಸ್ಟ್ 16ರಂದು ಮಧ್ಯಾಹ್ನ ಸುಪ್ರೀಂಕೋರ್ಟ್ನ ಗೇಟ್ 'ಡಿ'ಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಕಂಡ ಭದ್ರತಾ ಸಿಬ್ಬಂದಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದರು.
ಇದನ್ನೂ ಓದಿ: Supreme Court ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಮಹಿಳೆ, ಪುರುಷ..!
ಮಹಿಳೆಯ ದೇಹ ಶೇ.65ರಷ್ಟು ಸುಟ್ಟಿದ್ದು, ಆತ ಶೇ.85ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದ. ಆದರೆ ಇಂದು ಮುಂಜಾನೆ ಈ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ. ಅಂದು ನಡೆದ ಘಟನೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ.
ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದ ಕಾರಣ ಇವರ ಹೇಳಿಕೆಗಳನ್ನು ಪಡೆಯಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.