ETV Bharat / bharat

ಬುಡಕಟ್ಟು ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣ​: ನಾಲ್ವರ ಬಂಧನ, ಅಪರಾಧಿಗಳಿಗೆ ಮರಣದಂಡನೆಯೇ ಸೂಕ್ತ ಎಂದ ಮಣಿಪುರ ಸಿಎಂ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Manipur parade incident
ಬುಡಕಟ್ಟು ಮಹಿಳೆಯರ ನಗ್ನ ಮೆರವಣಿಗೆ ಕೇಸ್​
author img

By

Published : Jul 21, 2023, 7:34 AM IST

Updated : Jul 21, 2023, 8:03 AM IST

ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗುಂಪಿನಲ್ಲಿ ಭಾಗಿಯಾಗಿ, ಅವರನ್ನು ಅಮಾನುಷವಾಗಿ ಎಳೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಸೇರಿದಂತೆ ಗುರುವಾರ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ನಿನ್ನೆ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, "ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಅಮಾನವೀಯ ಘಟನೆ. ಅಪರಾಧಿಗಳು ಮರಣದಂಡನೆಗೆ ಅರ್ಹರು" ಎಂದು ಹೇಳಿದರು. ಇದಾದ ಕೆಲವೇ ಗಂಟೆಗಳ ನಂತರ, ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೊದಲು ಬಂಧಿಸಲಾದ ಆರೋಪಿ ಹುಯಿರೆಮ್ ಹೆರೋಡಾಸ್ ಮೈತೆಯ್ (32) ಎಂದು ಗುರುತಿಸಲಾಗಿದೆ. ಇತರೆ ಮೂವರು ವ್ಯಕ್ತಿಗಳ ಕುರಿತಾದ ಮಾಹಿತಿ ತಿಳಿದುಬಂದಿಲ್ಲ.

ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಸಿಎಂ, "ಇದು ಮಾನವೀಯತೆಯ ವಿರುದ್ಧದ ಅಪರಾಧ. ಈ ಘೋರ ಅಪರಾಧದ ಕುರಿತು ನಮ್ಮ ಸರ್ಕಾರ ಮೌನವಾಗಿರುವುದಿಲ್ಲ. ವಿಡಿಯೋ ನೋಡಿದ ಕೂಡಲೇ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಸೈಬರ್ ಕ್ರೈಂ ಇಲಾಖೆಗೆ ಸೂಚಿಸಿದ್ದು, ಅಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ತಿಳಿಸಲಾಗಿದೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ಮತ್ತು ಸಹಜ ಸ್ಥಿತಿಗೆ ಮರಳುವಂತೆ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಈ ಸಂಬಂಧ ವಿವಿಧ ಸಮುದಾಯಗಳ ಸಂಘಟನೆಗಳು, ವ್ಯಾಪಾರಿಗಳು, ಧಾರ್ಮಿಕ ಸಂಸ್ಥೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಾಗಿದೆ. ನಾವು ಬಹುಕಾಲದಿಂದ ಒಟ್ಟಿಗೆ ವಾಸಿಸುತ್ತಿದ್ದೇವೆ. ಸಮುದಾಯಗಳ ನಡುವಿನ ತಪ್ಪು ತಿಳುವಳಿಕೆಯನ್ನು ಮಾತುಕತೆ ಮೂಲಕ ಪರಿಹರಿಸಬಹುದು, ಇದರಿಂದ ಶಾಂತಿಯಿಂದ ಬದುಕಲು ಸಾಧ್ಯ" ಎಂದು ಹೇಳಿದರು.

ಇದನ್ನೂ ಓದಿ : ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ತೀವ್ರ ಆಕ್ರೋಶ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕೇಸ್​ಗೆ ಸಂಬಂಧಿಸಿದ ವೈರಲ್​ ವಿಡಿಯೋವನ್ನು ಸ್ವಯಂಪ್ರೇರಿತವಾಗಿ ಗ್ರಹಿಸಿದ ಪೊಲೀಸರು ನಿನ್ನೆ ರಾತ್ರಿ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ ಮತ್ತು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲು ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಕುಕಿ ಸಮುದಾಯದ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ವಿಡಿಯೋ ವೈರಲ್ ಆದ ಬಳಿಕ ಇಡೀ ದೇಶದಲ್ಲಿ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ಮಹಿಳೆಯರನ್ನು ವಿವಸ್ತ್ರಗೊಳಿಸಿದ ನಂತರ ಅನಾಗರಿಕರ ಗುಂಪೊಂದು ಕಾನೂನು, ಪೊಲೀಸ್ ಮತ್ತು ಸರ್ಕಾರದ ಭಯವಿಲ್ಲದೆ ತಿರುಗಾಡುತ್ತಿರುವುದು ಕಂಡುಬಂದಿತ್ತು. ವಿಡಿಯೋ ಬಹಿರಂಗವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಬೇಸರ ವ್ಯಕ್ತಪಡಿಸಿ, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮತ್ತೊಂದೆಡೆ, ವಿಡಿಯೋ ನೋಡಿ ನಮಗೆ ಬೇಸರವಾಗಿದೆ, ಇದರಿಂದ ಭಾರತದ 140 ಕೋಟಿ ನಾಗರಿಕರು ಅವಮಾನಕ್ಕೊಳಗಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಮೇ 3ರಿಂದ ಹಿಂಸಾಚಾರ ಪ್ರಾರಂಭವಾಗಿದ್ದು, ಇಲ್ಲಿಯವರೆಗೆ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ: ಹೆಚ್ಚಿದ ಆಕ್ರೋಶದ ಜ್ವಾಲೆ.. ಬೃಹತ್ ಪ್ರತಿಭಟನೆ

Last Updated : Jul 21, 2023, 8:03 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.