ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆದ ಹಿಂಸಾಚಾರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಮುಂದಾಗಿದೆ. ಜನಾಂಗೀಯ ಹಿಂಸಾಚಾರದ ತನಿಖೆಗಾಗಿ ಗುವಾಹತಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಜಯ್ ಲಂಬಾ ನೇತೃತ್ವದ ಮೂವರು ಸದಸ್ಯರ ತನಿಖಾ ಆಯೋಗವನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ತನಿಖಾ ಆಯೋಗವು "ಮೊದಲ ಸಭೆಯ ದಿನದಿಂದ ಆರು ತಿಂಗಳ ಒಳಗಾಗಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಆಯೋಗದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅಜಯ್ ಲಂಬಾ ಅವರ ಜೊತೆಗೆ ಅಸ್ಸೋಂ-ಮೇಘಾಲಯ ಕೇಡರ್‌ನ 1982ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿ ಹಿಮಾಂಶು ಶೇಖರ್ ದಾಸ್ ಮತ್ತು ತೆಲಂಗಾಣ ಕೇಡರ್‌ನ 1986 ಬ್ಯಾಚ್‌ನ ನಿವೃತ್ತ ಐಪಿಎಸ್ ಅಧಿಕಾರಿ ಅಲೋಕ ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಮಣಿಪುರ ಸರ್ಕಾರವು ಮೇ 29ರಂದು ಈ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ತನಿಖಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಮಣಿಪುರ ಸರ್ಕಾರದ ಶಿಫಾರಸಿನ ಮೇರೆಗೆ, ಕೇಂದ್ರ ಸರ್ಕಾರವು ತನಿಖಾ ಆಯೋಗವನ್ನು ನೇಮಕ ಮಾಡಿದೆ.
ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ರಾಜ್ಯಕ್ಕೆ ಬೇಕಾದ ಆಹಾರ, ಔಷಧಗಳು ಮತ್ತು ಇಂಧನದಂತಹ ಮೂಲಭೂತ ಮತ್ತು ಅಗತ್ಯ ಸರಕುಗಳ ಸಾಗಾಟಕ್ಕೆ ರಾಷ್ಟ್ರೀಯ ಹೆದ್ದಾರಿ- 2ರಲ್ಲಿನ ತಡೆಯನ್ನು ಹಿಂತೆಗೆದುಕೊಳ್ಳುವಂತೆ ಮಣಿಪುರದ ಜನರಲ್ಲಿ ಮನವಿ ಶಾ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರಲ್ಲಿ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಕೇಳಿಕೊಂಡಿದ್ದಾರೆ.
ತಮ್ಮ ಟ್ವೀಟ್ನಲ್ಲಿ "ಮಣಿಪುರದ ಜನರಲ್ಲಿ ನಾನು ಮನವಿ ಮಾಡುವುದೇನೆಂದರೆ ಇಂಫಾಲ್- ದಿಮಾಪುರ್ ರಾಷ್ಟ್ರೀಯ ಹೆದ್ದಾರಿ-2ರಲ್ಲಿನ ತಡೆಯನ್ನು ತೆಗೆದುಹಾಕಿ ರಾಜ್ಯಕ್ಕೆ ಬೇಕಾದ ಆಹಾರ, ಔಷಧಿಗಳು, ಪೆಟ್ರೋಲ್ / ಡೀಸೆಲ್ ಹಾಗೂ ಇತರ ಅಗತ್ಯ ವಸ್ತುಗಳು ಜನರನ್ನು ತಲುಪಿಸಲು ಸಹಕರಿಸಬೇಕು ಎಂದು ಹೇಳಿದ್ದಾರೆ. ನಾವೆಲ್ಲ ಒಟ್ಟಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಈ ಸುಂದರ ರಾಜ್ಯ ಪುನಃ ಸ್ಥಾಪಿಸಲು ಸಾಧ್ಯ ಎಂದು ಇದೇ ವೇಳೆ ಹೇಳಿದ್ದಾರೆ.
-
My sincerest appeal to the people of Manipur is to lift the blockades at the Imphal-Dimapur, NH-2 Highway, so that food, medicines, Petrol/Diesel, and other necessary items can reach the people.
— Amit Shah (@AmitShah) June 4, 2023 " class="align-text-top noRightClick twitterSection" data="
I also request that Civil Society Organisations do the needful in bringing…
">My sincerest appeal to the people of Manipur is to lift the blockades at the Imphal-Dimapur, NH-2 Highway, so that food, medicines, Petrol/Diesel, and other necessary items can reach the people.
— Amit Shah (@AmitShah) June 4, 2023
I also request that Civil Society Organisations do the needful in bringing…My sincerest appeal to the people of Manipur is to lift the blockades at the Imphal-Dimapur, NH-2 Highway, so that food, medicines, Petrol/Diesel, and other necessary items can reach the people.
— Amit Shah (@AmitShah) June 4, 2023
I also request that Civil Society Organisations do the needful in bringing…
ಮಣಿಪುರ ಜನಾಂಗೀಯ ಹಿಂಸಾಚಾರ : ರಾಜ್ಯದ ಜನಸಂಖ್ಯೆಯ ಶೇ.53ರಷ್ಟಿರುವ ಮೇಟಿ ಸಮುದಾಯವು ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕೆ ಬೇಡಿಕೆ ಇಟ್ಟಿದೆ. ಇದು ಸುಮಾರು ಶೇ.40ರಷ್ಟಿರುವ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗದವರನ್ನು ಕೆರಳುವಂತೆ ಮಾಡಿದೆ. ಅಲ್ಲದೇ, ಇದನ್ನು ವಿರೋಧಿಸಿ ಅಖಿಲ ಬುಡಕಟ್ಟು ವಿದ್ಯಾರ್ಥಿ ಸಂಘವು ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಹಮ್ಮಿಕೊಂಡಿತ್ತು.
ಈ ವೇಳೆ ಚುರಾಚಂದ್‌ಪುರ ಜಿಲ್ಲೆಯ ಟೊರ್ಬಂಗ್ ಪ್ರದೇಶದಲ್ಲಿ ಘರ್ಷಣೆ ಉಂಟಾಗಿದೆ. ಇದರಿಂದ ಎರಡು ಗುಂಪುಗಳ ನಡುವೆ ದಾಳಿ, ಪ್ರತಿದಾಳಿ ನಡೆದಿದೆ. ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಂಘರ್ಷದಲ್ಲಿ ಅನೇಕ ಅಂಗಡಿಗಳು ಮತ್ತು ಮನೆಗಳನ್ನು ಧ್ವಂಸಗೊಳಿಸಲಾಗಿತ್ತು. ಇದು ರಾಜ್ಯಾದ್ಯಂತ ತೀವ್ರ ಹಿಂಸಾಚಾರಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ : ಮಣಿಪುರ ಹಿಂಸಾಚಾರ : 45 ಅಂಧ ವಿದ್ಯಾರ್ಥಿಗಳನ್ನು ರಕ್ಷಿಸಿದ ಅಸ್ಸೋಂ ರೈಫಲ್ಸ್