ಇಂಫಾಲ್ (ಮಣಿಪುರ): ಪರಿಶಿಷ್ಟ ಪಂಗಡ (ಎಸ್ಟಿ) ಸ್ಥಾನಮಾನ ವಿಚಾರವಾಗಿ ಮಣಿಪುರದಲ್ಲಿ ಬುಡಕಟ್ಟು ಮತ್ತು ಬಹುಸಂಖ್ಯಾತ ಮೈಟೀಸ್ ಸಮುದಾಯದ ನಡುವಿನ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ಹತೋಟಿಗೆ ತರಲು ಕಂಡಲ್ಲಿ ಗುಂಡಿಗೆ ಆದೇಶಿಸಲಾಗಿದೆ. ಮತ್ತೊಂದೆಡೆ, ವಿಶೇಷ ಪಡೆಗಳಾದ ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
-
#WATCH | Manipur: An Indian Air Force (IAF) aircraft, carrying Central forces, landed in Imphal earlier this evening. pic.twitter.com/RTwy2oK0hj
— ANI (@ANI) May 4, 2023 " class="align-text-top noRightClick twitterSection" data="
">#WATCH | Manipur: An Indian Air Force (IAF) aircraft, carrying Central forces, landed in Imphal earlier this evening. pic.twitter.com/RTwy2oK0hj
— ANI (@ANI) May 4, 2023#WATCH | Manipur: An Indian Air Force (IAF) aircraft, carrying Central forces, landed in Imphal earlier this evening. pic.twitter.com/RTwy2oK0hj
— ANI (@ANI) May 4, 2023
ರಾಜ್ಯದ ಜನಸಂಖ್ಯೆಯ ಶೇ.53ರಷ್ಟಿರುವ ಬುಡಕಟ್ಟು ಜನಾಂಗದವರಲ್ಲದ ಮೈಟೀಸ್ ಸಮುದಾಯವು ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕೆ ಬೇಡಿಕೆ ಇಟ್ಟಿದೆ. ಇದು ಸುಮಾರು ಶೇ.40ರಷ್ಟಿರುವ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗದವರನ್ನು ಕೆರಳಿಸಿದೆ. ಅಲ್ಲದೇ, ಇದನ್ನು ವಿರೋಧಿಸಿ ಬುಧವಾರ ಅಖಿಲ ಬುಡಕಟ್ಟು ವಿದ್ಯಾರ್ಥಿ ಸಂಘವು ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಹಮ್ಮಿಕೊಂಡಿತ್ತು.
ಈ ವೇಳೆ ಚುರಾಚಂದ್‌ಪುರ ಜಿಲ್ಲೆಯ ಟೊರ್ಬಂಗ್ ಪ್ರದೇಶದಲ್ಲಿ ಘರ್ಷಣೆ ಉಂಟಾಗಿದೆ. ಇದರಿಂದ ಎರಡು ಗುಂಪುಗಳ ನಡುವೆ ದಾಳಿ, ಪ್ರತಿದಾಳಿ ನಡೆದಿದೆ. ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಂಘರ್ಷದಲ್ಲಿ ಅನೇಕ ಅಂಗಡಿಗಳು ಮತ್ತು ಮನೆಗಳನ್ನು ಧ್ವಂಸಗೊಳಿಸಲಾಯಿತು. ಅಲ್ಲದೇ, ಬೆಂಕಿ ಹಚ್ಚಿ ಸುಟ್ಟುಹಾಕಲಾಗಿದೆ. ಇದು ರಾಜ್ಯಾದ್ಯಂತ ಹಿಂಸಾಚಾರಕ್ಕೂ ಕಾರಣವಾಗಿದೆ.
ಕಂಡಲ್ಲಿ ಗುಂಡು ಆದೇಶ: ರಾಜ್ಯಾದ್ಯಂತ ಹತೋಟಿಗೆ ತರಲು ಮಣಿಪುರ ಪೊಲೀಸರೊಂದಿಗೆ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಪಡೆಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆ 55 ಸೇನಾ ತುಕಡಿಗಳನ್ನು ಭದ್ರತೆ ಬಳಕೆ ಮಾಡಲಾಗಿದೆ. ಜೊತೆಗೆ ಗಲಭೆಗಳನ್ನು ನಿಭಾಯಿಸಲು ಕ್ಷಿಪ್ರ ಕಾರ್ಯ ಪಡೆಗಳನ್ನೂ ರವಾನಿಸಲಾಗಿದೆ. ಇಲ್ಲಿಯವರೆಗೆ, 9,000 ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಪಡೆಗಳು ರಕ್ಷಿಸಿವೆ.
ಇದರ ನಡುವೆ ಗುರುವಾರ ಕಂಡಲ್ಲಿ ಗುಂಡಿಗೆ ರಾಜ್ಯಪಾಲರು ಆದೇಶಿಸಿದ್ದಾರೆ. ಮನವೊಲಿಕೆ, ಎಚ್ಚರಿಕೆಗೂ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಎಲ್ಲ ಮ್ಯಾಜಿಸ್ಟ್ರೇಟ್‌ಗಳು ಈ ಆದೇಶ ಉಪಯೋಗಿಸಬಹುದು ಎಂದು ರಾಜ್ಯ ಸರ್ಕಾರದ ಗೃಹ ಆಯುಕ್ತರ ಸಹಿಯೊಂದಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ: ಮೈಟೀಸ್ ಪ್ರಾಬಲ್ಯದ ಇಂಫಾಲ್ ಪಶ್ಚಿಮ, ಕಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಮತ್ತು ಬುಡಕಟ್ಟು ಪ್ರಾಬಲ್ಯದ ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇದರೊಂದಿಗೆ ರಾಜ್ಯಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.
ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಈ ಹಿಂಸಾಚಾರವು ಸಮಾಜದಲ್ಲಿನ ತಪ್ಪು ತಿಳಿವಳಿಕೆಯ ಪರಿಣಾಮವಾಗಿದೆ. ಇದರಲ್ಲಿ ಅಮೂಲ್ಯವಾದ ಜೀವಗಳನ್ನು ಕಳೆದುಕೊಂಡಿದ್ದಾರೆ, ಆಸ್ತಿ-ಪಾಸ್ತಿ ಹಾನಿಯಾಗಿದೆ. ಇದು ಅತ್ಯಂತ ದುರದೃಷ್ಟಕರ. ಆದರೆ, ಸಾವಿನ ಅಂಕಿ-ಅಂಶ ತಕ್ಷಣಕ್ಕೆ ಲಭ್ಯವಾಗಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರ ಜೀವ ಮತ್ತು ಆಸ್ತಿ ರಕ್ಷಣೆಗೆ ಹೆಚ್ಚುವರಿ ಅರೆಸೇನಾ ಪಡೆಗಳ ರವಾನಿಸುವಂತೆ ಕೋರಲಾಗಿದೆ. ಹಿಂಸಾಚಾರದಲ್ಲಿ ತೊಡಗುವ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಪಡೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಭುಗಿಲೆದ್ದ 'ಮೀಸಲಾತಿ' ಹಿಂಸಾಚಾರ: 7,500 ಜನರ ಸ್ಥಳಾಂತರ.. ಸಿಎಂ ಜೊತೆ ಶಾ ಮಾತುಕತೆ