ಇಂಪಾಲ್, ಮಣಿಪುರ: ಕಳೆದ 45 ದಿನಗಳಿಂದ ಹಿಂಸಾಚಾರದ ಬೆಂಕಿಯಲ್ಲಿ ಮಣಿಪುರ (Manipur Violence) ಹೊಗೆಯಾಡುತ್ತಿದೆ. ಒಂದೂವರೆ ತಿಂಗಳು ಕಳೆದರೂ ಮಣಿಪುರದಲ್ಲಿ ಹಿಂಸಾಚಾರ ಪ್ರಕ್ರಿಯೆ ನಿಂಲ್ಲುವಂತೆ ಕಾಣುತ್ತಿಲ್ಲ. ಇದೀಗ ನಿವೃತ್ತ ಸೇನಾಧಿಕಾರಿಯೊಬ್ಬರು ತಮ್ಮ ರಾಜ್ಯ ಮಣಿಪುರವನ್ನು ಯುದ್ಧಪೀಡಿತ ಲಿಬಿಯಾ, ಲೆಬನಾನ್ ಮತ್ತು ಸಿರಿಯಾಗಳೊಂದಿಗೆ ಹೋಲಿಸಿರುವುದು ಬೆಳಕಿಗೆ ಬಂದಿದೆ.
ನಿವೃತ್ತ ಲೆಫ್ಟಿನೆಂಟ್ ಜನರಲ್ ಎಲ್ ನಿಶಿಕಾಂತ್ ಸಿಂಗ್ ಟ್ವೀಟ್ ಮಾಡಿ, ನಿವೃತ್ತ ಜೀವನ ನಡೆಸುತ್ತಿರುವ ನಾನು ಮಣಿಪುರದ ಸರಳ ಭಾರತೀಯ. ರಾಜ್ಯ ಈಗ ‘ರಾಜ್ಯರಹಿತ’ವಾಗಿದೆ. ಲಿಬಿಯಾ, ಲೆಬನಾನ್, ನೈಜೀರಿಯಾ, ಸಿರಿಯಾದಲ್ಲಿ ನಡೆಯುತ್ತಿರುವಂತೆ ಇಲ್ಲಿ ಸಹ ಜೀವ ಮತ್ತು ಆಸ್ತಿಯನ್ನು ಯಾರು ಬೇಕಾದರೂ, ಯಾವಾಗ ಬೇಕಾದರೂ ನಾಶಪಡಿಸಬಹುದು. ಮಣಿಪುರವನ್ನು ತನ್ನ ರಸದಲ್ಲಿಯೇ ಕರಗಿಸಲು ಬಿಟ್ಟಂತೆ ತೋರುತ್ತಿದೆ. ಈ ಬಗ್ಗೆ ಯಾರಾದರೂ ಕೇಳುತ್ತಿದ್ದೀರಾ? ಎಂದು ಟ್ವೀಟ್ ಮಾಡಿದ್ದಾರೆ. ನಿವೃತ್ತ ಲೆಫ್ಟಿನೆಂಟ್ ಜನರಲ್ ಅವರು ಮಾಡಿರುವ ಈ ಟ್ವೀಟ್ ಭಾರೀ ವೈರಲ್ ಆಗುತ್ತಿದೆ.
-
An extraordinary sad call from a retired Lt Gen from Manipur. Law & order situation in Manipur needs urgent attention at highest level. @AmitShah @narendramodi @rajnathsingh https://t.co/VH4EsLkWSU
— Ved Malik (@Vedmalik1) June 16, 2023 " class="align-text-top noRightClick twitterSection" data="
">An extraordinary sad call from a retired Lt Gen from Manipur. Law & order situation in Manipur needs urgent attention at highest level. @AmitShah @narendramodi @rajnathsingh https://t.co/VH4EsLkWSU
— Ved Malik (@Vedmalik1) June 16, 2023An extraordinary sad call from a retired Lt Gen from Manipur. Law & order situation in Manipur needs urgent attention at highest level. @AmitShah @narendramodi @rajnathsingh https://t.co/VH4EsLkWSU
— Ved Malik (@Vedmalik1) June 16, 2023
ಇನ್ನು ಮಾಜಿ ಸೇನಾ ಮುಖ್ಯಸ್ಥ ವೇದ್ ಪ್ರಕಾಶ್ ಮಲಿಕ್ ಅವರು ಎಲ್ ನಿಶಿಕಾಂತ್ ಸಿಂಗ್ ಅವರ ಪೋಸ್ಟ್ ಅನ್ನು ಮರು ಟ್ವೀಟ್ ಮಾಡಿದ್ದಾರೆ. ಮಣಿಪುರದ ನಿವೃತ್ತ ಲೆಫ್ಟಿನೆಂಟ್ ಜನರಲ್ ಅವರ ನೋವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಹೇಳಿದ್ದಾರೆ. ಮಲಿಕ್ ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿ ‘ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ತಕ್ಷಣ ಗಮನ ಹರಿಸಬೇಕಾಗಿದೆ’ ಎಂದು ಮನವಿ ಮಾಡಿದರು.
ನಾಗರಿಕರಿಗೆ ಗಾಯ: ಮಣಿಪುರದ ಇಂಫಾಲ್ ನಗರದಲ್ಲಿ ಭದ್ರತಾ ಪಡೆಗಳು ಮತ್ತು ಜನಸಮೂಹದ ನಡುವೆ ಶುಕ್ರವಾರ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ ಇಂಫಾಲದಲ್ಲಿ ಗುಂಪೊಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರ ಮನೆಗಳನ್ನು ಸುಡಲು ಪ್ರಯತ್ನಿಸಿತು ಎಂದು ಅಧಿಕಾರಿಗಳು ಶನಿವಾರ ಈ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ರಾತ್ರಿಯಿಡೀ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇನ್ನು ಇಂಫಾಲ್ ಪಶ್ಚಿಮದ ಇರಿಂಗಾಬಾಮ್ ಪೊಲೀಸ್ ಠಾಣೆಯಲ್ಲಿ ಲೂಟಿಯ ಯತ್ನ ನಡೆದಿದೆ. ಆದರೆ, ಈ ಸಮಯದಲ್ಲಿ ಯಾವುದೇ ಆಯುಧ ಕಳ್ಳತನವಾಗಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಸೇನೆ, ಅಸ್ಸೋಂ ರೈಫಲ್ಸ್ ಮತ್ತು ಮಣಿಪುರ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ಇಂಫಾಲ್‌ನಲ್ಲಿ ಮಧ್ಯರಾತ್ರಿಯವರೆಗೂ ಜಂಟಿ ಕಾರ್ಯಾಚರಣೆ ನಡೆಸಿತು. ಸುಮಾರು 1,000 ಜನರ ಗುಂಪು ಅರಮನೆ ಸಂಕೀರ್ಣದ ಬಳಿಯ ಕಟ್ಟಡಗಳಿಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿತು. ಆಗ ಗುಂಪನ್ನು ಚದುರಿಸಲು ಆರ್‌ಎಎಫ್ ಅಶ್ರುವಾಯು ಶೆಲ್‌ಗಳು ಮತ್ತು ರಬ್ಬರ್ ಬುಲೆಟ್‌ಗಳನ್ನು ಹಾರಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಂಫಾಲದಲ್ಲಿ ಜನಸಮೂಹ ಶಾಸಕ ಬಿಸ್ವಜಿತ್ ಅವರ ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿತು. ಆದ,ರೆ ಆರ್‌ಎಎಫ್ ತುಕಡಿ ಗುಂಪನ್ನು ಚದುರಿಸಿತು. ಮಧ್ಯರಾತ್ರಿಯ ಜನಸಮೂಹವು ಸಿಂಜೆಮೈಯಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿತು. ಆದರೆ ಸೇನೆಯು ಗುಂಪನ್ನು ಚದುರಿಸಿದ ಕಾರಣ ಅದನ್ನು ಹಾನಿ ಮಾಡಲು ಸಾಧ್ಯವಾಗಲಿಲ್ಲ. ಇಂಫಾಲ್‌ನ ಪೊರಂಪೇಟೆ ಬಳಿಯ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ದೇವಿ ಅವರ ಮನೆಗೆ ಮಧ್ಯರಾತ್ರಿ ದರೋಡೆ ಮಾಡಲು ಗುಂಪೊಂದು ಯತ್ನಿಸಿತು.ಆದರೆ ಭದ್ರತಾ ಪಡೆಗಳು ಅವರನ್ನು ಓಡಿಸಿದರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವರ ಮನೆಗೆ ನುಗ್ಗಿದ ಗುಂಪು: ಮಣಿಪುರದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಗುರುವಾರ ಕೇಂದ್ರ ಸಚಿವರೊಬ್ಬರ ಮನೆ ಮತ್ತು ಈ ಘಟನೆಗೂ ಒಂದು ದಿನ ಮುನ್ನ ರಾಜ್ಯ ಸಚಿವರೊಬ್ಬರ ಮನೆ ಮೇಲೆ ನಡೆದ ದಾಳಿಯಿಂದ ಈ ಅಂಶ ಸ್ಪಷ್ಟವಾಗಿ ಗೋಚರಿಸುತ್ತದೆ. ಇಂಫಾಲದಲ್ಲಿರುವ ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ಮನೆಯನ್ನು ಗುರುವಾರ ರಾತ್ರಿ ಗುಂಪೊಂದು ಧ್ವಂಸಗೊಳಿಸಿದೆ ಮತ್ತು ಬೆಂಕಿ ಹಚ್ಚಿದೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಗುಂಪೊಂದು ಸಚಿವ ರಂಜನ್ ಸಿಂಗ್ ಅವರ ನಿವಾಸಕ್ಕೆ ಬಲವಂತವಾಗಿ ನುಗ್ಗಿ ಅವರ ಆಸ್ತಿಗೆ ಬೆಂಕಿ ಹಚ್ಚಲು ಯತ್ನಿಸಿತು. ಮನೆಯಲ್ಲಿ ನಿಯೋಜಿಸಲಾಗಿದ್ದ ಗೃಹರಕ್ಷಕ ದಳದವರಿಗೂ ಜನಜಂಗುಳಿಯನ್ನು ತಡೆಯಲು ಸಾಧ್ಯವಾಗಲಿಲ್ಲ.
ನನಗೆ ಆಘಾತವಾಗಿದೆ ಎಂದು ಆರ್ ಕೆ ರಂಜನ್ ಸಿಂಗ್ ಹೇಳಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನನ್ನ ತವರು ರಾಜ್ಯದಲ್ಲಿ ಆಗುತ್ತಿರುವುದನ್ನು ನೋಡಿದರೆ ತುಂಬಾ ಬೇಸರವಾಗುತ್ತದೆ. ನಾನು ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗಿರುವ ಜನರು ಸಂಪೂರ್ಣವಾಗಿ ಅಮಾನವೀಯರು ಎಂದು ಹೇಳಿದರು.
ಮಣಿಪುರದಲ್ಲಿ ಹಿಂಸಾಚಾರ ಏಕೆ?: ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಐಕಮತ್ಯ ಮೆರವಣಿಗೆ' ಆಯೋಜಿಸಿದ ನಂತರ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಒಂದು ತಿಂಗಳ ಹಿಂದೆ ಜಾತಿ ಹಿಂಸಾಚಾರ ಭುಗಿಲೆದ್ದಿದ್ದು, 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಯ್ದಿರಿಸಿದ ಅರಣ್ಯ ಭೂಮಿಯಿಂದ ಕುಕಿ ಗ್ರಾಮಸ್ಥರನ್ನು ಹೊರಹಾಕುವ ಉದ್ವಿಗ್ನತೆಯು ಹಿಂದಿನ ಘರ್ಷಣೆಗಳಿಗೆ ಕಾರಣವಾಯಿತು, ಇದು ಹಲವಾರು ಸಣ್ಣ ಆಂದೋಲನಗಳಿಗೆ ದಾರಿ ಮಾಡಿಕೊಟ್ಟಿದೆ.
ಓದಿ: Manipur violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರ ಗುಂಪು