ETV Bharat / bharat

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್​ ಸಿಸೋಡಿಯಾ ಬಂಧನ 14 ದಿನ ವಿಸ್ತರಣೆ

ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸಿಬಿಐ ಬಂಧನದ ಅವಧಿಯನ್ನು 14 ದಿನಗಳ ವಿಸ್ತರಿಸಲಾಗಿದೆ.

ಮನೀಶ್​ ಸಿಸೋಡಿಯಾ ಬಂಧನ 14 ದಿನ ವಿಸ್ತರಣೆ
ಮನೀಶ್​ ಸಿಸೋಡಿಯಾ ಬಂಧನ 14 ದಿನ ವಿಸ್ತರಣೆ
author img

By

Published : Apr 3, 2023, 8:22 PM IST

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಏಪ್ರಿಲ್‌ 17 ರವರೆಗೆ ವಿಸ್ತರಿಸಿದೆ.

  • #WATCH | Delhi's former Deputy Chief Minister Manish Sisodia brought to Rouse Avenue Court in CBI's case related to alleged irregularities in the now-scrapped excise policy. His Judicial custody got over today. pic.twitter.com/3xYJqygz7a

    — ANI (@ANI) April 3, 2023 " class="align-text-top noRightClick twitterSection" data=" ">

ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮನೀಶ್​ ಸಿಸೋಡಿಯಾ ಅವರನ್ನು ಸಿಬಿಐ ಪೊಲೀಸರು ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಇಂದು ಹಾಜರುಪಡಿಸಿದರು. ಬಳಿಕ ಎಎಪಿ ನಾಯಕನ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸಿಬಿಐ ಮನವಿ ಪುರಸ್ಕರಿಸಿದ ಕೋರ್ಟ್​ 14 ದಿನಗಳ ಕಾಲ ಬಂಧನ ವಿಸ್ತರಿಸಿತು.

ಅಬಕಾರಿ ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಎದುರಿಸುತ್ತಿರುವ ದೆಹಲಿ ಮಾಜಿ ಡಿಸಿಎಂ ಸಿಸೋಡಿ ಅವರನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ಮಾರ್ಚ್​ 6 ರಿಂದ ನ್ಯಾಯಾಂಗ ಬಂಧನಕ್ಕೆ ಪಡೆದಿದೆ. ಇದಕ್ಕೂ ಮೊದಲು ಅವರನ್ನು ಫೆಬ್ರವರಿ 26 ರಂದು ಪ್ರಕರಣದಡಿ ಬಂಧಿಸಿತ್ತು. ತನಿಖೆಯು ನಿರ್ಣಾಯಕ ಹಂತದಲ್ಲಿದೆ. ಹೀಗಾಗಿ ಸಿಸೋಡಿಯಾ ಅವರ ಬಂಧನವನ್ನು ಇನ್ನಷ್ಟು ದಿನ ವಿಸ್ತರಣೆ ಮಾಡಬೇಕು ಎಂದು ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ಕೋರ್ಟ್​ಗೆ ಮನವಿ ಮಾಡಿದ್ದರು.

ಪ್ರಕರಣದ ಹಿನ್ನೆಲೆ: ಅಬಕಾರಿ ನೀತಿಯಲ್ಲಿ ಹಗರಣ ಆರೋಪ ಕೇಳಿ ಬಂದ ಬಳಿಕ ದೆಹಲಿ ಸರ್ಕಾರದ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಫೆಬ್ರವರಿ 26 ರಂದು ಬಂಧಿಸಿತ್ತು. ಇದೇ ವೇಳೆ, ಜಾರಿ ನಿರ್ದೇಶನಾಲಯ(ಇಡಿ) ಕೂಡ ಕೇಸ್​ ದಾಖಲಿಸಿಕೊಂಡು ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಬಂಧಿಸಿತು.

ಮನೀಶ್​ ಸಿಸೋಡಿಯಾ ಅವರು ಪ್ರಕರಣದಲ್ಲಿ ನಿಖರ ಮಾಹಿತಿ ನೀಡುತ್ತಿಲ್ಲ, ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಐವರನ್ನು ಆರೋಪಿಗಳ ಹೆಸರನ್ನು ಅದರಲ್ಲಿ ನಮೂದಿಸಿದೆ. ಸಿಬಿಐ ತನಿಖೆಯ ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಸ್ತುತ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ.

ದೂರು ನೀಡಿದ್ದ ಲೆಫ್ಟಿನೆಂಟ್​ ಗವರ್ನರ್​: ದೆಹಲಿಯ ಆಪ್ ಸರ್ಕಾರ ಹೊಸ ಮದ್ಯ ನೀತಿಯಲ್ಲಿ ಅಕ್ರಮ ಎಸಗಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನೀಡಿದ ದೂರಿನ ಆಧಾರದ ಮೇರೆಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 15 ಮಂದಿಯನ್ನು ತಪ್ಪಿತಸ್ಥರು ಎಂದು ಹೆಸರಿಸಿದೆ. ಜಾರಿ ನಿರ್ದೇಶನಾಲಯ(ಇಡಿ) ಕೂಡ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, 9 ಮಂದಿಯನ್ನು ಬಂಧಿಸಿದೆ. ಇತ್ತ ಸಿಬಿಐ 4 ಮಂದಿಯನ್ನು ಬಂಧಿಸಿದೆ.

ಇದನ್ನೂ ಓದಿ: ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಮನೀಶ್​ ಸಿಸೋಡಿಯಾ ಭಾವನಾತ್ಮಕ ಪತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.