ETV Bharat / bharat

Mann Ki Baat: ತುರ್ತು ಪರಿಸ್ಥಿತಿ ಅವಧಿ ದೇಶದ ಇತಿಹಾಸದಲ್ಲಿ ಕರಾಳ ಯುಗ: ಪ್ರಧಾನಿ ಮೋದಿ - ಬಿಪರ್‌ಜೋಯ್ ಚಂಡಮಾರುತದಿಂದ ಉಂಟಾದ ವಿನಾಶ

1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Emergency dark era in country's history PM Modi

author img

By

Published : Jun 18, 2023, 2:04 PM IST

ನವದೆಹಲಿ : ಪ್ರಜಾಪ್ರಭುತ್ವವನ್ನು ಬೆಂಬಲಿಸಿದವರ ಮೇಲೆ ದೌರ್ಜನ್ಯ ಎಸಗಿದ ತುರ್ತು ಪರಿಸ್ಥಿತಿಯ ಅವಧಿಯು ದೇಶದ ಇತಿಹಾಸದಲ್ಲಿ ಕರಾಳ ಯುಗ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದು ಅದು ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಂವಿಧಾನವನ್ನು ಅತ್ಯುನ್ನತ ಸ್ಥಾನದಲ್ಲಿ ಇಟ್ಟಿದೆ. ಹೀಗಾಗಿ ನಮ್ಮ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ ಜೂನ್ 25ರ ದಿನಾಂಕವನ್ನು ನಾವು ಮರೆಯಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು.

ಇಂದು ತಮ್ಮ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನೈಸರ್ಗಿಕ ವಿಕೋಪಗಳನ್ನು ಎದುರಿಸುವಲ್ಲಿ ಭಾರತದ ಸಾಮರ್ಥ್ಯ ಹೆಚ್ಚಾಗಿರುವುದನ್ನು ಶ್ಲಾಘಿಸಿದರು. ಬಿಪರ್‌ಜೋಯ್ ಚಂಡಮಾರುತದಿಂದ ಉಂಟಾದ ವಿನಾಶದಿಂದ ಕಛ್​ನ ಜನತೆ ಶೀಘ್ರವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಎರಡು ದಶಕಗಳ ಹಿಂದೆ ಸಂಭವಿಸಿದ ವಿನಾಶಕಾರಿ ಭೂಕಂಪದ ನಂತರ ಕಛ್​ನ ಜನರಿಗೆ ಚೇತರಿಸಿಕೊಳ್ಳಲು ಸಾಧ್ಯವಾಗಲಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿತ್ತು. ಆದರೆ ಕಛ್​ನ ಜನ ಆ ದುರಂತದಿಂದ ಚೇತರಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಕಳೆದ ಕೆಲ ವರ್ಷಗಳಲ್ಲಿ ಭಾರತದ ವಿಪತ್ತು ನಿರ್ವಹಣಾ ಸಾಮರ್ಥ್ಯ ಹೆಚ್ಚಿದೆ ಮತ್ತು ಅದಕ್ಕೆ ಸಾಕಷ್ಟು ಉದಾಹರಣೆಗಳು ಕಾಣಿಸುತ್ತಿವೆ ಎಂದು ಮೋದಿ ಹೇಳಿದರು. ಬಿಪರ್‌ಜೋಯ್ ಚಂಡಮಾರುತವು ಗುರುವಾರ ಸಂಜೆ ಜಖೌ ಬಳಿ ಅಪ್ಪಳಿಸಿದೆ ಮತ್ತು ಗುಜರಾತ್‌ನ ಕಛ್​ ಮತ್ತು ಸೌರಾಷ್ಟ್ರ ಪ್ರದೇಶಗಳಲ್ಲಿ ವಿನಾಶವನ್ನುಂಟು ಮಾಡಿದೆ.

ಮುಂದಿನ ವಾರ ತಾವು ಅಮೆರಿಕ ಪ್ರವಾಸಕ್ಕೆ ತೆರಳುವ ಕಾರಣದಿಂದ ತಿಂಗಳ ಕೊನೆಯ ಭಾನುವಾರ ಹಮ್ಮಿಕೊಳ್ಳಬೇಕಿದ್ದ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮವನ್ನು ಜೂನ್ 18 ರಂದೇ ನಡೆಸುತ್ತಿರುವುದಾಗಿ ಪ್ರಧಾನಿ ತಿಳಿಸಿದರು. ಅಮೆರಿಕ ಭೇಟಿಯ ವೇಳೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿರುವುದಾಗಿ ಎಂದು ಮೋದಿ ಹೇಳಿದರು. "ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ಮತ್ತು ಅದನ್ನು ದೈನಂದಿನ ದಿನಚರಿಯ ಭಾಗವಾಗಿಸಿಕೊಳ್ಳುವಂತೆ ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ" ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಜನತೆಗೆ ಕರೆ ನೀಡಿದರು.

ಅಕ್ಟೋಬರ್ 3, 2014 ರಂದು ಮೊದಲ ಪ್ರಸಾರವಾದ ಮನ್ ಕಿ ಬಾತ್ ಭಾರತೀಯ ರೇಡಿಯೊ ಕಾರ್ಯಕ್ರಮವಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪ್ರಾಮುಖ್ಯತೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಮತ್ತು ವಿಚಾರಗಳ ಬಗ್ಗೆ ನಾಗರಿಕರನ್ನು ಉದ್ದೇಶಿಸಿ ಮಾತನಾಡುತ್ತಾರೆ. 2015 ರಲ್ಲಿ ಮಾಜಿ ಯುಎಸ್ ಅಧ್ಯಕ್ಷ ಬರಾಕ್ ಒಬಾಮಾ ಅವರು ವಿಶೇಷ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಆಗ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದರು.

ಇದನ್ನೂ ಓದಿ : Petrol Diesel: ಮುಂಗಾರು ಆಗಮನ: ಪೆಟ್ರೋಲ್, ಡೀಸೆಲ್​ ಮಾರಾಟ ಇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.