ETV Bharat / bharat

CCTV Video: ಸೇಲಂನಲ್ಲಿ ಎರಡು ಬಸ್​​ಗಳ ಮಧ್ಯೆ ಭೀಕರ ಅಪಘಾತ

ಖಾಸಗಿ ಬಸ್​ಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

author img

By

Published : May 18, 2022, 3:08 PM IST

Updated : May 18, 2022, 3:20 PM IST

BUS ACCIDENT IN SALEM TABUS ACCIDENT IN SALEM TAMILNADUMILNADU
BUS ACCIDENT IN SALEM TAMILNADU

ಸೇಲಂ(ತಮಿಳುನಾಡು): ತಮಿಳುನಾಡಿನ ಸೇಲಂನಲ್ಲಿ ಎರಡು ಖಾಸಗಿ ಬಸ್​​ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಘಟನೆಯ ವಿಡಿಯೋ ಬಸ್​​​ನೊಳಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಸೇರಿದಂತೆ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೇಲಂನಲ್ಲಿ ಎರಡು ಬಸ್​​ಗಳ ಮಧ್ಯೆ ಭೀಕರ ಅಪಘಾತ

ಎಡಪ್ಪಾಯಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್​​ವೊಂದು ತಿರುಚೆಂಗೋಡಿನಿಂದ ಬರುತ್ತಿದ್ದ ಇನ್ನೊಂದು ಬಸ್​​ಗೆ ಡಿಕ್ಕಿ ಹೊಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಸೇಲಂ ಮತ್ತು ಎಡಪ್ಪಾಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭೀಕರ ಅಪಘಾತದ ರಭಸಕ್ಕೆ ಒಂದು ಬಸ್​​ನ ಚಾಲಕ​ ಸೇರಿದಂತೆ ಅನೇಕ ಪ್ರಯಾಣಿಕರು ತೂರಿಕೊಂಡು ಹೊರಬಿದ್ದಿದ್ದಾರೆ.

ಭೀಕರ ಅಪಘಾತದ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಘಟನೆಯಲ್ಲಿ ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

Last Updated : May 18, 2022, 3:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.