ಪಾಕೂರ್(ಜಾರ್ಖಂಡ್) : ಸಾಹಿಬ್ ಗಂಜ್ಗೋ-ಬಿಂದಪುರ ಹೆದ್ದಾರಿಯ ಕಮರ್ದಿಹಾ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಟ್ರಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ 16 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ಪ್ರಕಾರ, ಬರ್ಹರ್ವಾದಿಂದ ದುಮ್ಕಾಗೆ ಹೋಗುತ್ತಿದ್ದ ಬಸ್ ಮತ್ತು ಎಲ್‌ಪಿಜಿ ಸಿಲಿಂಡರ್ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮಂಜು ಮುಸುಕಿದ ಕಾರಣ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ 40 ಪ್ರಯಾಣಿಕರಿದ್ದರು.
ಮಾಹಿತಿ ತಿಳಿದ ತಕ್ಷಣ ಅಮದಪಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಳಿಕ ಸ್ಥಳೀಯರ ಜೊತೆಗೂಡಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದರು.
ಇನ್ನು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.