ಆಗ್ರಾ: ಶಿವರಾತ್ರಿ ಹಬ್ಬದಂದೇ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಸುಕಿನ ಜಾವದಲ್ಲಿ ಲಾರಿ ಮತ್ತು ಸ್ಕಾರ್ಪಿಯೋ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಎಂಟು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.
ಸ್ಕಾರ್ಪಿಯೋದಲ್ಲಿ 12 ಜನ ಬಿಹಾರದ ನಿವಾಸಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯ ಮುಂದುವರಿಸಿದರು.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಾಗಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಎಟ್ಮಡೌಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.