ETV Bharat / bharat

ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದ ಟ್ರಕ್​.. 14 ಜನ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ.. 14 ಜನ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ.. ಭರದಿಂದ ಸಾಗಿದ ರಕ್ಷಣಾ ಕಾರ್ಯ..

Many people killed  injured in road accident  road accident in MPs Sidhi  ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದ ಟ್ರಕ್  50ಕ್ಕೂ ಹೆಚ್ಚು ಮಂದಿಗೆ ಗಾಯ  ಸಿಧಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ  ಭರದಿಂದ ಸಾಗಿದ ರಕ್ಷಣಾ ಕಾರ್ಯ  ಭೀಕರ ರಸ್ತೆ ಅಪಘಾತ  ಟ್ರಕ್​ವೊಂದು ನಿಂತಿದ್ದ ಬಸ್​ಗಳಿಗೆ ಡಿಕ್ಕಿ  14 ಜನರು ಮೃತ  ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಸಂತಾಪ  ಮಧ್ಯಪ್ರದೇಶ ಸರ್ಕಾರ ಪರಿಹಾರ ಘೋಷಣೆ
ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದ ಟ್ರಕ್​
author img

By

Published : Feb 25, 2023, 7:35 AM IST

ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದ ಟ್ರಕ್​.. 14 ಜನ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಸಿಧಿ, ಮಧ್ಯಪ್ರದೇಶ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೊಹಾನಿಯಾ ಸುರಂಗದ ಬಳಿ ಟ್ರಕ್​ವೊಂದು ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ, 14 ಜನರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ದುರ್ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ ಅವರ ರ್‍ಯಾಲಿಗೆ ತೆರಳಿದ್ದ ಬಸ್ ವಾಪಸ್ ಆಗುತ್ತಿದ್ದವು. ಈ ವೇಳೆ, ಬಸ್​ ಚಾಲಕರು ಸುರಂಗ ಮಾರ್ಗದ ಬಳಿ ಬಸ್​ಗಳನ್ನು ನಿಲ್ಲಿಸಿದ್ದಾರೆ. ಆಗ ಎದುರಗಡೆಯಿಂದ ವೇಗವಾಗಿ ಬರುತ್ತಿದ್ದ ಟ್ರಕ್​ವೊಂದು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಬಸ್​ವೊಂದು ಪಲ್ಟಿಯಾಗಿದ್ದು, ಉಳಿದ ಬಸ್​ಗಳಿಗೆ ಡಿಕ್ಕಿ ರಭಸಕ್ಕೆ ಜಖಂಗೊಂಡಿದ್ದವು. ಈ ಭೀಕರ ಅಪಘಾತದಲ್ಲಿ 14 ಜನ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

  • सीधी में हुई दुर्घटना हृदय विदारक है। रीवा के अस्पताल में घायलों का इलाज जारी है। डॉक्टरों ने बताया कि सभी घायल खतरे से बाहर हैं।
    घायलों के इलाज की बेहतर से बेहतर व्यवस्था की गई है, फिर भी आवश्यकता पड़ने पर इलाज के लिए बाहर ले जाया जायेगा। pic.twitter.com/UENnqR9AND

    — Shivraj Singh Chouhan (@ChouhanShivraj) February 24, 2023 " class="align-text-top noRightClick twitterSection" data=" ">

ಅಪಘಾತ ಸಂಭವಿಸಿದ್ದು ಹೇಗೆ?: ಸತ್ನಾ ಜಿಲ್ಲೆಯಲ್ಲಿ ಆಯೋಜಿಸಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನೇಕ ಪ್ರಯಾಣಿಕರನ್ನು ನೇರವಾಗಿ ಸಿಧಿ ಜಿಲ್ಲೆಗೆ ತೆರಳಿದ್ದರು. ನಂತರ ಪ್ರಯಾಣಿಕರನ್ನು ಹೊತ್ತ ಬಸ್​​​ಗಳು ಕಾರ್ಯಕ್ರಮ ಮುಗಿದ ನಂತರ ಸತ್ನಾದಿಂದ ಪ್ರಯಾಣಿಕರ ಸ್ವಗ್ರಾಮದತ್ತ ಪ್ರಯಾಣ ಬೆಳಸಿದ್ದವರು. ಬಸ್ ನೇರವಾಗಿ ರೇವಾ ಮೂಲಕ ಹೋಗುತ್ತಿದ್ದ ಸಂದರ್ಭದಲ್ಲಿ ಸಿಧಿ ಜಿಲ್ಲೆಯ ಮೊಹಾನಿಯಾ ಸುರಂಗವನ್ನು ದಾಟಿತ್ತು.

ಸುರಂಗ ದಾಟಿದ ತಕ್ಷಣ ಬಸ್ಸುಗಳನ್ನು ಡ್ರೈವರ್​ಗಳು ಅನನ್ಯ ಕಾರಣದಿಂದಾಗಿ ನಿಲ್ಲಿಸಿದ್ದರು. ಇದೇ ವೇಳೆ, ರೇವಾ ಕಡೆಯಿಂದ ಬರುತ್ತಿದ್ದ ಟ್ರಕ್‌ ಬರುತ್ತಿತ್ತು. ಬಸ್​ ಬಳಿ ಬರುತ್ತಿದ್ದಂತೆ ಟ್ರಕ್​ನ ಟೈರ್‌ ಒಡೆದಿದ್ದು, ವಾಹನದ ನಿಯಂತ್ರಣ ತಪ್ಪಿ ಸುರಂಗ ಮಾರ್ಗದ ಬಳಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್‌ಗೆ ಡಿಕ್ಕಿಯಾದ ರಭಸಕ್ಕೆ ಅಲ್ಲಿ ನಿಂತಿದ್ದ ಮೂರು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡರೆ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

  • दिवंगत व्यक्तियों के आश्रित परिजनों को योग्यतानुसार शासकीय सेवा में लिया जाएगा। गंभीर घायलों को ₹2 लाख तथा सामान्य घायलों को ₹1 लाख की सहायता देने की व्यवस्था हम करेंगे।

    दिवंगत व्यक्तियों के परिवार की पूरी चिंता की जाएगी। संकट की इस घड़ी में हम पीड़ित परिवारों के साथ खड़े हैं।

ಆಸ್ಪತ್ರೆಗಳು ಅಲರ್ಟ್‌: ಈ ಭೀಕರ ಅಪಘಾತದ ವಿಷಯ ತಿಳಿದ ತಕ್ಷಣ ಉನ್ನತ ಅಧಿಕಾರಿಗಳು ಸಮೀಪದ ದೊಡ್ಡ ಆಸ್ಪತ್ರೆಗಳನ್ನೆಲ್ಲಾ ಅಲರ್ಟ್‌ ಮೋಡ್‌ನಲ್ಲಿ ಇರಿಸಿದ್ದರು. ಇದಲ್ಲದೇ ಹಲವು ಆಂಬ್ಯುಲೆನ್ಸ್ ವಾಹನಗಳೂ ಸ್ಥಳಕ್ಕೆ ಆಗಮಿಸಿದವು. ಘಟನೆ ಕುರಿತು ಮಾಹಿತಿ ಪಡೆದ ಸಮೀಪದ ಗ್ರಾಮಗಳ ಜನರು ಕೂಡ ಸ್ಥಳದಲ್ಲಿ ಜಮಾಯಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು. ಗಾಯಗೊಂಡವರಲ್ಲಿ ವಯಸ್ಕರೂ ಇದ್ದಾರೆ ಎಂದು ಹೇಳಲಾಗಿದ್ದು, ರೇವಾದ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ಸಿಧಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಂಡಕ್ಕೆ ಎಲ್ಲಾ ತುರ್ತು ಸೇವೆಗಳೊಂದಿಗೆ ಸಿದ್ಧರಾಗಿರಲು ಅಧಿಕಾರಿಗಳು ಸೂಚನೆ ನೀಡಿದ್ದರು. ಕೂಡಲೇ ಗಾಯಾಳುಗಳನ್ನು ಆಯಾ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಸಂತಾಪ: ಅಪಘಾತದ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದಿಯಲ್ಲಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ದೇವರು ಅಗಲಿದ ಆತ್ಮಗಳಿಗೆ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಈ ಆಳವಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಬರೆದಿದ್ದಾರೆ.

ಮಧ್ಯಪ್ರದೇಶ ಸರ್ಕಾರ ಪರಿಹಾರ ಘೋಷಣೆ: ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಉದ್ಯೋಗ ನೀಡುವುದಾಗಿ ಸಿಎಂ ಶಿವರಾಜ್ ಭರವಸೆ ನೀಡಿದ್ದಾರೆ.

ಓದಿ: 25 ಮಹಿಳೆಯರಿಗೆ ವಂಚಿಸಿ ನಗ್ನ ಫೋಟೋ: ನಾಲ್ವರು ಆರೋಪಿಗಳ ಬಂಧನ, ಕಿಂಗ್‌ಪಿನ್ ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.