ETV Bharat / bharat

ಕೊರೊನಾ ಸೋಂಕಿತ ಹುಡುಗಿಯ ಅದ್ಧೂರಿ ಮದುವೆ.. ಪ್ರಕರಣ ದಾಖಲು!

ಮಹಾಮಾರಿ ಕೊರೊನಾ ವೈರಸ್ ಸೋಂಕಿಗೊಳಗಾಗಿದ್ದ ಹುಡುಗಿಯೊಬ್ಬಳ ಅದ್ಧೂರಿ ಮದುವೆ ಕಾರ್ಯಕ್ರಮ ನಡೆದಿದ್ದು, ಇದೀಗ ಪ್ರಕರಣ ದಾಖಲಾಗಿದೆ.

author img

By

Published : Feb 22, 2021, 2:55 PM IST

Marriage ceremony
Marriage ceremony

ಕೊಲ್ಲಾಪುರ(ಮಹಾರಾಷ್ಟ್ರ): ಮಹಾಮಾರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದರೂ, ಹುಡುಗಿಯೊಬ್ಬಳ ಮದುವೆ ಮಾಡಲಾಗಿದ್ದು, ಇದೀಗ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಇಚಲಕರಂಜಿಯಲ್ಲಿ ಈ ಘಟನೆ ನಡೆದಿದ್ದು, ಕೊರೊನಾ ವೈರಸ್​ ಇದ್ದ ಹುಡುಗಿಯೊಬ್ಬಳಿಗೆ ಅದ್ಧೂರಿಯಾಗಿ ಮದುವೆ ಕಾರ್ಯಕ್ರಮ ನಡೆಸಲಾಗಿದೆ. ವಿವಾಹ ಕಾರ್ಯಕ್ರಮದಲ್ಲಿ 50 ಜನರು ಭಾಗಿಯಾಗಿದ್ದರು. ಘಟನೆಗೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದ್ದು, ವಿಚಾರಣೆಗೊಳಪಡಿಸಿದೆ.

Marriage ceremony
ಮದುವೆ ಕಾರ್ಯಕ್ರಮದಲ್ಲಿ ಜನರು ಭಾಗಿ

ಓದಿ: ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ಸಿದ್ಧತೆ: ವೈನಾಡಲ್ಲಿ ರಾಹುಲ್​ ಟ್ರ್ಯಾಕ್ಟರ್​ ರ‍್ಯಾಲಿ

ಇಚಲಕರಂಜಿ ಸೇವಾ ಸಮಿತಿಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಮದುವೆಗೆ ಆಹ್ವಾನ ನೀಡಿದ್ದ ಜನರನ್ನು ವಿಚಾರಣೆಗೊಳಪಡಿಸಲಾಗಿದೆ. ಆದರೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮದುವೆ ಸಂದರ್ಭದಲ್ಲಿ ಕೊರೊನಾ ಎಲ್ಲ ನಿಯಮ ಪಾಲನೆ ಮಾಡಿರುವುದಾಗಿ ಸೇವಾ ಸಮಿತಿ ಹೇಳಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿದ್ದು, ಹೀಗಾಗಿ ಮೂರು ನಗರಗಳಲ್ಲಿ ಈಗಾಗಲೇ ಲಾಕ್​ಡೌನ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.