ETV Bharat / bharat

ಕೋವಿಡ್​ ಸೆಂಟರ್​ನಲ್ಲಿ ಯುವತಿ ಮೇಲೆ ಲೈಂಗಿಕ ಕಿರುಕುಳ... ಆರೋಪಿ ಬಂಧನ

author img

By

Published : Nov 6, 2020, 3:25 PM IST

ಕೋವಿಡ್​ ಸೆಂಟರ್​ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.

Married woman
Married woman

ಮುಂಬೈ: 21 ವರ್ಷದ ವಿವಾಹಿತೆ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೂಡಾ ದಾಖಲಾಗಿದೆ. ಮುಂಬೈನ ಕುರಾರ್​ ಪ್ರದೇಶದಲ್ಲಿನ ಕೋವಿಡ್​ ಸೆಂಟರ್​ನಲ್ಲಿ ಈ ಘಟನೆ ನಡೆದಿದ್ದು, ಡಿಎನ್​ಎ ಖಾಸಗಿ ಆಸ್ಪತ್ರೆಯಲ್ಲಿ ವಿವಾಹಿತ ಮಹಿಳೆ ಮೇಲೆ ದೌರ್ಜನ್ಯ ಎಸಗಲಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ.

ಭದ್ರತಾ ಸಿಬ್ಬಂದಿ ಸುರೇಶ್​ ಕೊಚೆವಾಡ್​​ ಮೊದಲನೇ ಮಹಡಿಯ ಕೋವಿಡ್​ ಕೇಂದ್ರದಲ್ಲಿ ಮಲಗಿದ್ದ 21 ವರ್ಷದ ಯುವತಿಗೆ ಕಿರುಕುಳ ನೀಡಲು ಯತ್ನಿಸಿದ್ದು, ಭಯಭೀತರಾದ ಮಹಿಳೆ ಎಚ್ಚರಗೊಂಡು ಕೂಗಲು ಪ್ರಾರಂಭಿಸಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಯುರಿಟಿಯನ್ನ ಕುರಾರ್ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ, ಹರಿಹಾಯ್ದಿರುವ ಬಿಜೆಪಿ ಮುಖಂಡ ಕಿರ್ತಿ ಸೋಮಯ್ಯ, ಮಹಾರಾಷ್ಟ್ರ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಗೃಹ ಸಚಿವ ದೇಶ್​ಮುಖ್​, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.