ಜೈಪುರ: ಇಲ್ಲಿನ ಮುರಳಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯೊಂದರಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 26 ವರ್ಷದ ವಿವಾಹಿತ ಮಹಿಳೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಮಹಿಳೆಯನ್ನು ಅಂಜಲಿ ಎಂದು ಗುರುತಿಸಲಾಗಿದೆ. ತಾನು ಕೆಲಸ ಮಾಡುತ್ತಿದ್ದ ಅಂಗಡಿ ಮುಂದೆ ಸ್ಕೂಟಿ ಪಾರ್ಕ್ ಮಾಡುತ್ತಿದ್ದಾಗ ಗುಂಡು ಹಾರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಸವಾಯಿ ಮಾನ್‌ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂಜಲಿ ಕಳೆದ ವರ್ಷ ಅಬ್ದುಲ್ ಲತೀಫ್ ಎಂಬ ಯುವಕನನ್ನು ವರಿಸಿದ್ದರು. ವಿವಾಹದ ನಂತರ ಲತೀಫ್ ತನ್ನ ಕುಟುಂಬಸ್ಥರಿಂದ ಬೇರ್ಪಟ್ಟು ಮುರಳೀಪುರ ಪ್ರದೇಶದಲ್ಲಿ ವಾಸಿಸಲು ಪ್ರಾರಂಭಿಸಿದ್ದಾರೆ. ಇದರಿಂದ ಮಹಿಳೆಯ ಮೇಲೆ ಅತ್ತೆ ಮನೆಯವರು ಕೋಪಗೊಂಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ಹುಡುಗನ ಅಣ್ಣ ಈ ಹಿಂದೆ ಹಲವು ಬಾರಿ ಬೆದರಿಕೆ ಹಾಕಿದ್ದು, ಆತ ಹಾಗೂ ಸ್ನೇಹಿತರ ಮೇಲೆ ಶಂಕೆ ವ್ಯಕ್ತವಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ವಂದಿತಾ ರಾಣಾ ತಿಳಿಸಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಇದನ್ನೂ ಓದಿ: ಅಥಣಿ: ರಾಜ್ಯೋತ್ಸವ ಮೆರವಣಿಗೆಯಲ್ಲಿ ನಾಲ್ವರ ಮೇಲೆ ಬ್ಲೇಡ್‌ನಿಂದ ಹಲ್ಲೆ