ETV Bharat / bharat

ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್​ ಕಡ್ಡಾಯ - ಮಾಸ್ಕ್ ಕಡ್ಡಾಯ

ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಹೆಚ್ಚಳ. ವೈರಸ್ ಹರಡದಂತೆ ತಡೆಗಟ್ಟಲು ಸರ್ಕಾರದ ಮಾರ್ಗಸೂಚಿ. ಮಾಸ್ಕ್​ ಧರಿಸದಿದ್ದರೆ ದಂಡ ವಿಧಿಸಲು ಆದೇಶ.

ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್​ ಕಡ್ಡಾಯ
Masks are mandatory in Delhi
author img

By

Published : Aug 11, 2022, 4:25 PM IST

ನವದೆಹಲಿ: ಕೊರೊನಾವೈರಸ್ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಮಾಸ್ಕ್ ಆದೇಶ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ. ಆದರೆ ಖಾಸಗಿ ಕಾರಿನಲ್ಲಿ ಪ್ರಯಾಣಿಸುವಾಗ ಮಾತ್ರ ಈ ನಿಯಮ ಅನ್ವಯಿಸುವುದಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 2,146 ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ 2,495 ಪ್ರಕರಣಗಳು ಪತ್ತೆಯಾಗಿದ್ದವು. ಕೊರೊನಾ ವೈರಸ್‌ನಿಂದ ಎಂಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ. ನಗರದಲ್ಲಿ ಕೋವಿಡ್ ಪಾಸಿಟಿವಿಟಿ ದರವು 17.83 ಪ್ರತಿಶತಕ್ಕೆ ಏರಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 8,205 ರಷ್ಟಿದೆ. ಈ ಪೈಕಿ 5,549 ರೋಗಿಗಳು ಮನೆಯಲ್ಲಿ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.