ETV Bharat / bharat

ದೆಹಲಿಯಲ್ಲಿ ದಿಢೀರ್​ ಹೆಚ್ಚಾಯ್ತು ಕೋವಿಡ್, ಮಾಸ್ಕ್ ಕಡ್ಡಾಯ; ತಪ್ಪಿದರೆ ₹500 ದಂಡ

author img

By

Published : Apr 20, 2022, 3:34 PM IST

ಕೋವಿಡ್ ಮಹಾಮಾರಿ ಅಬ್ಬರ ಜೋರಾಗಿರುವ ಕಾರಣ ದೆಹಲಿಯಲ್ಲಿ ಇದೀಗ ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದರೆ 500 ರೂಪಾಯಿ ದಂಡ ತೆರಬೇಕಾಗುತ್ತದೆ.

Masks Mandatory in Delhi
Masks Mandatory in Delhi

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ದಿಢೀರ್​ ಏರಿಕೆ ಕಂಡುಬಂದಿದೆ. ಹೀಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶಿಸಿದೆ. ಈ ನಿಯಮ ಉಲ್ಲಂಘಿಸಿದರೆ 500 ರೂ. ದಂಡ ವಿಧಿಸುವಂತೆ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಪ್ರಕಟಣೆ ಮಾತ್ರ ಹೊರಬೀಳಬೇಕಿದೆ.

ಇದನ್ನೂ ಓದಿ: ಹಿಂಸಾಚಾರ ನಡೆದ ಜಹಾಂಗಿರ್​ಪುರಿಯಲ್ಲಿ ಒತ್ತುವರಿ ಕಾರ್ಯಾಚರಣೆ.. ಸುಪ್ರೀಂಕೋರ್ಟ್​ನಿಂದ ತಡೆಯಾಜ್ಞೆ

ಕೋವಿಡ್ ಹತೋಟಿಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಿದ ಬಳಿಕ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾಗಿ ತಿಳಿದು ಬಂದಿದೆ. ಶಾಲಾ ಮಕ್ಕಳಲ್ಲಿ ಹೆಚ್ಚಾಗಿ ಕೋವಿಡ್ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು ಮುಂದಿನ ಎರಡು ದಿನಗಳಲ್ಲಿ ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಮುಂದಾಗಿದೆ. ಆದರೆ, ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟಿದೆ. ಕೋವಿಡ್​ ವ್ಯಾಕ್ಸಿನ್ ಪಡೆದುಕೊಳ್ಳದ ಜಾಗದಲ್ಲಿ ವೇಗವಾಗಿ ಲಸಿಕೆ ಹಾಕುವುದು ಹಾಗೂ ಅತಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಟೆಸ್ಟ್ ಮಾಡಿಸಲು ನಿರ್ಧರಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಾಗಿ ಜನರು ಸೇರಿಕೊಳ್ಳುವುದರ ಮೇಲೆ ನಿಗಾ ಇಡಲು ನಿರ್ಧರಿಸಿದೆ.

ಕಡ್ಡಾಯ ಮಾಸ್ಕ್ ಬಳಕೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರದಿಂದ ಇಂದು ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದ್ದು, ನಿಯಮ ಉಲ್ಲಂಘನೆ ಮಾಡಿದರೆ 500 ರೂ. ದಂಡ ವಿಧಿಸಲಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2,067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.