ವಡೋದರಾ (ಗುಜರಾತ್): ತೀವ್ರ ಆರ್ಥಿಕ ಸಮಸ್ಯೆಯಿಂದ ಸೆಕ್ಯೂರಿಟಿ ಗಾರ್ಡ್ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಕುಟುಂಬದ ಮುಖ್ಯಸ್ಥ ಮುಖೇಶ್ ಪಾಂಚಾಲ್ ಬದುಕುಳಿದರೆ, ಅವರ ಪತ್ನಿ ಮತ್ತು ಮಗ ಸಾವನ್ನಪ್ಪಿದ್ದಾರೆ. ಮಹಿಳೆ ಹಾಗೂ ಅವರ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಖಾಸಗಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖೇಶ್ ಗಂಭೀರವಾಗಿ ಗಾಯಗೊಂಡಿದ್ದು, ಎಸ್‌ಎಸ್‌ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಂಚಾಲ್ ಕುಟುಂಬ ಕಳೆದ ಐದು ವರ್ಷಗಳಿಂದ ವಡೋದರಾದ ರಾವ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಿರಾಮಿತಾರ್ ರಸ್ತೆಯ ಕಚಿಯಾ ಪೋಲ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.
ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಚುರುಕು: ಮಂಗಳವಾರ ಮುಂಜಾನೆ 6.30ರ ಸುಮಾರಿಗೆ ಮುಖೇಶ್ ಅವರ ನೆರೆಹೊರೆಯವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿರುವುದನ್ನು ನೋಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಅವರು ತಕ್ಷಣ ಸಹಾಯಕ್ಕಾಗಿ ಕೂಗಿದರು. ನೆರೆಹೊರಯವರು ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯ ತಂಡವೂ ಆಗಮಿಸಿದೆ.
ಮರಣೋತ್ತರ ಪರೀಕ್ಷೆ: ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಯಾಜಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ. ಆದರೆ, ಅವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗಗೊಳ್ಳಲಿದೆ ಎಂದು ರಾವಪುರ ಪೊಲೀಸ್ ಠಾಣೆಯ ಎಎಸ್‌ಐ ರಮೇಶಭಾಯ್ ಕಮೋಲ್ ಹೇಳಿದ್ದಾರೆ.
ಇದನ್ನೂ ಓದಿ: Bengaluru crime: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ
ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿತ್ತು ಈ ಕುಟುಂಬ- ಸ್ಥಳೀಯರ ಹೇಳಿಕೆ: ಸ್ಥಳೀಯ ನಿವಾಸಿ ನಿತಿನ್‌ಭಾಯ್ ಮಿಸ್ತ್ರಿ ಅವರು, "ನಾನು ಮಲಗಿದ್ದಾಗ ನನ್ನ ಸ್ನೇಹಿತ ಘಟನೆಯ ಬಗ್ಗೆ ನನಗೆ ತಿಳಿಸಲು ನನ್ನನ್ನು ಎಬ್ಬಿಸಿದನು. ನಾನು ಮಹಡಿಗೆ ಹೋದಾಗ, ತಾಯಿ ಹಾಗೂ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ" ಎಂದು ಹೇಳಿದರು. ಕುಟುಂಬವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿತ್ತು. ಇದರಿಂದ ಇಂತಹ ನಿರ್ಧಾರಕ್ಕೆ ಮುಂದಾಗಿದೆ ಎಂದು ನೆರೆಹೊರೆಯವರು ಶಂಕಿಸಿದ್ದಾರೆ. ಇತ್ತೀಚೆಗೆ ಬಾಡಿಗೆ ಮನೆ ಖಾಲಿ ಮಾಡುವಂತೆ ಕುಟುಂಬಕ್ಕೆ ಸೂಚಿಸಲಾಗಿತ್ತು ಎಂದು ಅವರು ಹೇಳಿದರು. ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ 4 ವರ್ಷದ ಹೆಣ್ಣು ಮಗು ಸಮೇತ ಮಹಿಳೆ ಆತ್ಮಹತ್ಯೆ