ಅಹಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್ನ ವಾಟ್ವಾ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಇಪ್ಪತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿಯಿಂದಾಗಿ ಕಾರ್ಖಾನೆಯಲ್ಲಿ ಭಾರಿ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಘಟನೆಯಲ್ಲಿ ಇದುವರೆಗೆ ಯಾವುದೇ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.