ಸೂರತ್ (ಗುಜರಾತ್): ಇಲ್ಲಿನ ಪಾಲ್ಸಾನಾ ತಾಲೂಕಿನ ವಾರೆಲಿ ಗ್ರಾಮದಲ್ಲಿರುವ ಮಾಸ್ಕ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಪ್ಪಿಸಿಕೊಳ್ಳಲು ಪೈಪ್ ಹಿಡಿದು ಕೆಳಗಿಳಿಯುವ ಸಾಹಸ ಮಾಡಿದ್ದು, ಈ ವೇಳೆ ಕೆಳಗೆ ಬಿದ್ದು ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ವಾರೆಲಿ ಗ್ರಾಮದ ಮಾಸ್ಕ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು 200 ಕಾರ್ಮಿಕರು ಒಳಗೆ ಸಿಲುಕಿದ್ದರು. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡಕ್ಕೆ ಹಾಕಲಾಗಿದ್ದ ಪೈಪ್ ಹಿಡಿದು ಕೆಳಗಿಳಿಯುವಾಗ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಹಲವರಿಗೆ ಸುಟ್ಟ ಗಾಯವಾಗಿದೆ.
ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಆ್ಯಂಬುಲೆನ್ಸ್ಗಳು ಸ್ಥಳಕ್ಕಾಗಮಿಸಿತ್ತು. ಕಾರ್ಖಾನೆಯಲ್ಲಿ ದಟ್ಟ ಹೊಗೆಯಿಂದಾಗಿ ಕಾರ್ಯಾಚರಣೆಗೂ ಅಡ್ಡಿಯಾಗಿತ್ತು. ಇತ್ತ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸೂರತ್ನ ಮೇಯರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.
ಪ್ರಸ್ತುತ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಾರ್ಖಾನೆಯೊಳಗಿದ್ದ ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ: ಭಿವಂಡಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂಪಾಯಿಯ ಪೀಠೋಪಕರಣ ಸುಟ್ಟು ಭಸ್ಮ