ಗುವಾಹಟಿ(ಮಣಿಪುರ): ಇಲ್ಲಿನ ನೋನಿ ಜಿಲ್ಲೆಯ ತುಪುಲ್ ರೈಲ್ವೆ ನಿಲ್ದಾಣದ ಬಳಿ ಭೂಕುಸಿತ ಉಂಟಾಗಿ ಏಳು ಜನರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, 20ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಶೋಧಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ನೋನಿ ಸೇನಾ ವೈದ್ಯಕೀಯ ಘಟಕಕ್ಕೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಕ್ಷಣಾ ಪಿಆರ್‌ಒ ಲೆಫ್ಟಿನೆಂಟ್ ಕರ್ನಲ್ ಸುಮಿತ್ ಕೆ ಶರ್ಮಾ ತಿಳಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದೇ ಪ್ರಮಾಣವಚನ ಸಾಧ್ಯತೆ
ಸಾವನ್ನಪ್ಪಿರುವವರಲ್ಲಿ ಅನೇಕರು ಸ್ಥಳೀಯ ಸೇನೆಗೆ ಸೇರಿದವರೆಂದು ಎಂದು ವರದಿಯಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಸ್ಥಳದಲ್ಲಿ ಜಿಲ್ಲಾಡಳಿತ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ತುರ್ತು ಸಭೆ ಸಹ ನಡೆಸಿದ್ದಾರೆ.
ಮಣಿಪುರ, ಅಸ್ಸೋಂನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುತ್ತಿದೆ.