ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಆಂದೋಲನ ನಡೆಸುತ್ತಿರುವ ರೈತರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸುವಂತೆ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ರಾಷ್ಟ್ರ ರಾಜಧಾನಿಯಲ್ಲಿ ತಮ್ಮ 65ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಯಾರೊಂದಿಗೂ ಮೈತ್ರಿ ಮಾಡುವುದಿಲ್ಲ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ಉಚಿತವಾಗಿ ನೀಡುವುದಾಗಿಯೂ ಅವರು ಘೋಷಣೆ ಮಾಡಿದರು.
ಕೇಂದ್ರ ಸರ್ಕಾರದ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅನ್ನು ಸ್ವಾಗತಿಸಿದ ಮಾಯಾವತಿ, ಉಚಿತ ವ್ಯಾಕ್ಸಿನ್ ನೀಡುವಂತೆ ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ಕೇಳಿಕೊಂಡರು.