ಬಂಡಾ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಂಡಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜ್ನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಕೆಲ ದಿನಗಳಿಂದ ವೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ ಈತ ಕಾಲೇಜ್ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾನೆ.
ವಿದ್ಯಾರ್ಥಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಈ ನಡುವೆಯೇ ಸಾವಿನ ಹಾದಿ ತುಳಿದಿದ್ದಾನೆ. ಈ ಹಿಂದೆಯೂ ಅನೇಕ ಸಲ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಮಾಹಿತಿ ದೊರೆತಿದೆ.
ಇದನ್ನೂ ಓದಿ: ಮಾನಸಿಕ ಖಿನ್ನತೆ: ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ
ಸಂಪೂರ್ಣ ವಿವರ: ಮೆಡಿಕಲ್ ಕಾಲೇಜ್ನಲ್ಲಿ ವಿದ್ಯಾರ್ಥಿ ಅಮಿತ್ ಮಜುಂದಾರ್ 4ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡ್ತಿದ್ದ. ಭಾನುವಾರ ಸಂಜೆ ಹಾಸ್ಟೆಲ್ ಕೊಠಡಿಗೆ ಬಂದು ಸಾವಿಗೆ ಶರಣಾಗಿದ್ದಾನೆ. ನಂತರ ಕಾಲೇಜ್ನಲ್ಲಿ ಕೋಲಾಹಲ ಉಂಟಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ಪ್ರಭಾರಿ ಹಾಗೂ ವೈದ್ಯಕೀಯ ಕಾಲೇಜ್ನ ಸಹಾಯಕ ಪ್ರಾಧ್ಯಾಪಕ ಡಾ.ಭೀಮಸೇನ್ ಮಾತನಾಡಿದ್ದು, "ವಿದ್ಯಾರ್ಥಿ ಅಮಿತ್ ಈ ಹಿಂದೆಯೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಈ ನಿರ್ಧಾರ ಕೈಗೊಂಡಿದ್ದಾನೆ" ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿ ಆನಂದ್ ಪಾಂಡೆ ಪ್ರತಿಕ್ರಿಯಿಸಿ, "ಅಮಿತ್ ಮಜುಂದಾರ್ ಮೃತದೇಹವನ್ನು ಹಾಸ್ಟೆಲ್ ಕೊಠಡಿಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಈಗಾಗಲೇ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದೇವೆ. ಇದರ ಬಗ್ಗೆ ವಿದ್ಯಾರ್ಥಿ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ" ಎಂದರು.