ನವದೆಹಲಿ: ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದದ ವಿಚಾರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಬೇರೆ ರಾಷ್ಟ್ರಗಳು ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದು ಸ್ವಾಗತಾರ್ಹವಲ್ಲ ಎಂದಿದೆ.
ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಗ್ಚಿ ಈ ಕುರಿತು ಟ್ವೀಟ್ ಮಾಡಿದ್ದು, ಕರ್ನಾಟಕದ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಚಾರ ಹೈಕೋರ್ಟ್ನಲ್ಲಿ ವಿಚಾರಣೆಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದರ ಜೊತೆಗೆ ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಪ್ರಭುತ್ವದ ನೀತಿಗೆ ಅನುಗುಣವಾಗಿ ಈ ವಿಚಾರವನ್ನು ಬಗೆಹರಿಸಿಕೊಳ್ಳುತ್ತೇವೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಭಾರತದ ಬಗ್ಗೆ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಬಗ್ಗೆ ಪ್ರೇರಿತ ಅಭಿಪ್ರಾಯಗಳನ್ನು ಹೊರಹಾಕುವುದು ಸ್ವಾಗತಾರ್ಹವಲ್ಲ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ವಿಶ್ವಾದ್ಯಂತ 1 ಗಂಟೆಗಳ ಕಾಲ ಕೈಕೊಟ್ಟ ಟ್ವಿಟರ್.. ಈಗ ಎಲ್ಲವೂ ಸುಲಲಿತ