ETV Bharat / bharat

'ಯಾವುದೇ ಬಟನ್‌ ಒತ್ತಿದ್ರೂ ಬಿಜೆಪಿಗೆ ಓಟು': ಇವಿಎಂ ಕುರಿತು ಸುಳ್ಳು ವಿಡಿಯೋ ಹಂಚಿಕೊಂಡ ವ್ಯಕ್ತಿ ಸೆರೆ

author img

By

Published : Feb 19, 2023, 8:39 AM IST

ಎಲ್ಲಾ ಮತಗಳು ಬಿಜೆಪಿಗೆ ಹೋಗುತ್ತವೆ ಎಂದು ತೋರಿಸುವ ಇವಿಎಂನ ವಿಡಿಯೋ ಹಂಚಿಕೊಂಡ ಆರೋಪದಡಿ ಮೇಘಾಲಯದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

representative image
ಸಾಂಕೇತಿಕ ಚಿತ್ರ

ಶಿಲ್ಲಾಂಗ್ (ಮೇಘಾಲಯ): ಇವಿಎಂ(ವಿದ್ಯುನ್ಮಾನ ಮತಯಂತ್ರ)ನಲ್ಲಿರುವ ಯಾವುದೇ ಬಟನ್ ಒತ್ತಿದರೆ ಅದು ಬಿಜೆಪಿ ಪರವಾಗಿ ಮತ ಹಾಕುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಶೇರ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಎಫ್​​.ಆರ್.ಖಾರ್ಕೊಂಗೊರ್ ಶನಿವಾರ ಹೇಳಿದ್ದಾರೆ. ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್ ಜಿಲ್ಲೆಯ ಬೊಲೊಂಗ್ ಆರ್.ಸಂಗ್ಮಾ ಬಂಧಿತ ಆರೋಪಿ. ಈತ ಫೆ.16ರಂದು ಇವಿಎಂಗಳನ್ನು ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ವಿಡಿಯೋ ಕ್ಲಿಪ್ ಹಂಚಿಕೊಂಡಿದ್ದ.

ರೊಂಗ್ಜೆಂಗ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪೊಲೀಸರಿಗೆ ದೂರು ನೀಡಿದ ನಂತರ ಸಂಗ್ಮಾ ಅವರನ್ನು ಬಂಧಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆಯೊಂದಿಗೆ ವ್ಯವಹರಿಸುವ ಐಪಿಸಿ ಸೆಕ್ಷನ್ 171 ಜಿ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಖಾರ್ಕೊಂಗೊರ್ ತಿಳಿಸಿದ್ದಾರೆ. ವಿಎಂಗಳು ಅಥವಾ ವಿದ್ಯುನ್ಮಾನ ಮತಯಂತ್ರಗಳು ಟ್ಯಾಂಪರ್-ಪ್ರೂಫ್ ಆಗಿರುತ್ತವೆ ಮತ್ತು ಯಾವುದೇ ಕುಶಲತೆಯನ್ನು ಪ್ರಯತ್ನಿಸಿದರೆ ಫ್ಯಾಕ್ಟರಿ ರೀಸೆಟ್ ಮೋಡ್‌ಗೆ ಹೋಗುತ್ತವೆ. ಪ್ರತಿ ಹಂತದಲ್ಲೂ ಹಲವು ರಕ್ಷಣಾತ್ಮಕ ಕ್ರಮಗಳಿರುತ್ತವೆ ಎಂದು ಅವರು ಸ್ಪಷ್ಟಪಡಿಸಿದರು.

ಈಶಾನ್ಯದಲ್ಲಿ ಚುನಾವಣೆ ಭರಾಟೆ: ಫೆ.16 ರಂದು ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳೂ ಸೇರಿದಂತೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಕಮ್ಯುನಿಸ್ಟ್‌ ಪಕ್ಷಗಳು ಸ್ಪರ್ಧಿಸಿದ್ದವು. ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು 6 ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟು ಕೊಟ್ಟಿದೆ. ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿದ್ದು 13 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಎಡ ಪಕ್ಷಗಳಾದ ಸಿಪಿಐ, ಫಾರ್ವರ್ಡ್‌ ಬ್ಲಾಕ್‌, ಸಿಪಿಐ(ಎಂ), ಆರ್‌ಎಸ್‌ಪಿ ಪಕ್ಷ 47 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿವೆ. ಸ್ಥಳೀಯ ಪಕ್ಷ ತ್ರಿಪುರಾ ಮೋರ್ಚಾ 42 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಮಾರ್ಚ್ 2ರಂದು ಮತಎಣಿಕೆ ನಡೆಯಲಿದೆ. 30 ವರ್ಷಗಳಿಗೂ ಹೆಚ್ಚು ಕಾಲ ತ್ರಿಪುರಾದಲ್ಲಿ ಸಿಪಿಎಂ ಆಡಳಿತವಿತ್ತು. 2018ರಲ್ಲಿ ರಾಜ್ಯದಲ್ಲಿ ಯಾವುದೇ ಅಸ್ತಿತ್ವ ಹೊಂದಿರದ ಬಿಜೆಪಿ 60 ಸ್ಥಾನಗಳಲ್ಲಿ 36 ಸ್ಥಾನ ಗೆದ್ದು ಇತಿಹಾಸ ಬರೆದಿತ್ತು. ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಫೆ.27 ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ತ್ರಿಪುರಾ ವಿಧಾನಸಭೆ ಚುನಾವಣೆ 2023: ಮತದಾನ ಆರಂಭ, 259 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಈ ವರ್ಷ ಎಲ್ಲೆಲ್ಲಿ ಚುನಾವಣೆ?: ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದು 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಈಶಾನ್ಯ ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್‌, ತ್ರಿಪುರ (ಚುನಾವಣೆ ನಡೆದಿದೆ) ರಾಜ್ಯಗಳಿಗೆ ಫೆಬ್ರುವರಿ–ಮಾರ್ಚ್‌ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ 3 ರಾಜ್ಯಗಳಲ್ಲಿ ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಆಡಳಿತದಲ್ಲಿದೆ.

ಮಿಜೋರಾಂ ಚುನಾವಣೆ ನವೆಂಬರ್‌ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಇಲ್ಲಿ ಮಿಜೊ ಪ್ರಾದೇಶಿಕ ಪಕ್ಷ ಅಧಿಕಾರದಲ್ಲಿದೆ. ಕಾಂಗ್ರೆಸ್‌ ಮತ್ತು ಮಿಜೊ ಪಕ್ಷದ ನಡುವೆ ನೇರ ಸ್ಪರ್ಧೆ ಇರಲಿದೆ. ಬಿಜೆಪಿ ತ್ರಿಪುರ ಹಾಗೂ ಮೇಘಾಲಯ ರಾಜ್ಯಗಳಲ್ಲಿ ಅಧಿಕಾರಕ್ಕೇರುವ ತವಕದಲ್ಲಿದೆ. ಅಲ್ಲದೇ ನಾಗಾಲ್ಯಾಂಡ್‌ನಲ್ಲಿ ಪ್ರಾದೇಶಿಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಹೊತ್ತಿದೆ.

ತೆಲಂಗಾಣದಲ್ಲಿ ನವೆಂಬರ್‌ ಅಥವಾ ಡಿಸೆಂಬರ್​​ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಪ್ರಸ್ತುತ ಇಲ್ಲಿ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಅಧಿಕಾರದಲ್ಲಿದೆ. ಸಿಎಂ ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಸಾಂಪ್ರದಾಯಿಕ ಎದುರಾಳಿಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಕಾಂಗ್ರೆಸ್‌ನ ಹಲವು ನಾಯಕರು ಬಿಜೆಪಿಗೆ ವಲಸೆ ಹೋಗಿರುವುದರಿಂದ ಬಿಜೆಪಿ ಮತ್ತು ಬಿಆರ್‌ಎಸ್‌ ನಡುವೆ ತೀವ್ರ ಪೈಪೋಟಿ ಇರಲಿದೆ ಎಂಬುದು ರಾಜಕೀಯ ವಿಶ್ಲೇಷಕ ಮಾತು. ಮಧ್ಯಪ್ರದೇಶದಲ್ಲಿ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಆಡಳಿತದಲ್ಲಿರುವ ಬಿಜೆಪಿಗೆ ಕಾಂಗ್ರೆಸ್‌ ಪ್ರಬಲ ಪೈಪೋಟಿಯಾಗಿದೆ. ಕಾಂಗ್ರೆಸ್‌ ಆಡಳಿತ ಇರುವ ಛತ್ತೀಸ್‌ಗಢ ಹಾಗೂ ರಾಜಸ್ಥಾನ ರಾಜ್ಯಗಳ ವಿಧಾನಸಭೆ ಚುನಾವಣೆ 2024ರಲ್ಲಿ ನಡೆಯಲಿವೆ.

ಇದನ್ನೂ ಓದಿ: ಚುನಾವಣಾ ಪೂರ್ವ ತಯಾರಿ: ರಾಜ್ಯಕ್ಕೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ 3 ತಂಡ ಭೇಟಿ, ಪರಿಶೀಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.