ಶ್ರೀನಗರ(ಜಮ್ಮು ಮತ್ತು ಕಾಶ್ಮೀರ) : ಹೈದರ್‌ಪೋರಾ ಎನ್ಕೌಂಟರ್ನಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (People's Democratic Party) ಅಧ್ಯಕ್ಷೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ (Mehbooba Mufti) ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ಇತರ ನಾಯಕರೊಂದಿಗೆ ಮೆಹಬೂಬಾ ಮುಫ್ತಿ ಗುಪ್ಕಾರ್ ರಸ್ತೆಯ ತಮ್ಮ ನಿವಾಸದಿಂದ ರಾಜಭವನದವರೆಗೆ ಮೆರವಣಿಗೆ ನಡೆಸಿದರು.
ಈ ವೇಳೆ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ಆಮೀರ್ ಮಗ್ರೆ ಅವರ ಮೃತದೇಹವನ್ನು ಹಸ್ತಾಂತರ ಮಾಡಬೇಕು ಮತ್ತು ಈ ಹತ್ಯೆಗಳ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Lieutenant Governor of Manoj Sinha) ಅವರು ಈ ಘಟನೆಯ ಕುರಿತಂತೆ ಕ್ಷಮೆಯಾಚಿಸಬೇಕು. ಗುಂಡಿನ ಚಕಮಕಿಯಲ್ಲಿ ಹತ್ಯೆಗೀಡಾದವರ ಕುಟುಂಬಗಳನ್ನು ನಾನು ಭೇಟಿ ಮಾಡಲು ಬಯಸಿದ್ದೆನು.
ಆದರೆ, ಅವಕಾಶ ನೀಡಲಿಲ್ಲ ಎಂದು ಮೆಹಬೂಬಾ ಮುಫ್ತಿ ಆರೋಪಿಸಿದರು. ಜೊತೆಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಇಲ್ಲಿ ನಿರ್ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಸೋಮವಾರ, ಶ್ರೀನಗರದ ಹೈದರ್‌ಪೋರಾ ಪ್ರದೇಶದಲ್ಲಿ (Hyderpora gunfight) ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಕೊಂದಿರುವುದಾಗಿ ಪೊಲೀಸರು ಹೇಳಿದ್ದರು. ಆದರೆ, ಅವರು ಭಯೋತ್ಪಾದಕರಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದರು.
ಇದನ್ನೂ ಓದಿ: Sexual Assault Row : ಚೀನಾದ ಟೆನಿಸ್ ತಾರೆ ಪೆಂಗ್ ಶೂಯಿ ಪ್ರತ್ಯಕ್ಷ