ETV Bharat / bharat

ಪ್ರಧಾನಿಯವರ ಸರ್ವಪಕ್ಷ ಸಭೆಗೆ ಹೋಗ್ತೇವೆ: ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮುಫ್ತಿ ಸ್ಪಷ್ಟನೆ - ಆರ್ಟಿಕಲ್‌-370

ಆರ್ಟಿಕಲ್‌-370 ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅಲ್ಲಿನ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಭಾಗವಹಿಸುತ್ತೇವೆ ಎಂದು ಮಾಜಿ ಸಿಎಂ ಮೆಹಬೂಬ ಮುಫ್ತಿ ತಿಳಿಸಿದ್ದಾರೆ.

Mehbooba Mufti's Party To Meet Tomorrow To Decide On Invite For PM Meet
ಪ್ರಧಾನಿಯವರ ಸರ್ವಪಕ್ಷ ಸಭೆಗೆ ಹೋಗ್ತೇವೆ; ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮುಫ್ತಿ ಸ್ಪಷ್ಟನೆ
author img

By

Published : Jun 19, 2021, 1:55 PM IST

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷ (ಪಿಡಿಪಿ) ಭಾಗವಹಿಸುವ ಬಗ್ಗೆ ನಾಳೆ ಸಭೆ ನಡೆಸುತ್ತೇವೆ ಎಂದು ಮಾಜಿ ಸಿಎಂ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹೇಳಿದ್ದಾರೆ.

ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಬಗ್ಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಅಧಿಕೃತವಾಗಿ ಇಂದು ಅಥವಾ ನಾಳೆ ಆಹ್ವಾನ ನೀಡಲಿದ್ದಾರೆ. ಪಿಡಿಪಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದಾಗಿ ಮುಫ್ತಿ ಸ್ಪಷ್ಟಪಡಿಸಿದ್ದಾರೆ.

2019ರಲ್ಲಿ ಆರ್ಟಿಕಲ್‌-370 ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ. ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಭದ್ರತಾ ಮತ್ತು ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.