ETV Bharat / bharat

ಮಣಿಪುರ ಗಲಭೆ: ಪ್ರಕರಣ ದಾಖಲಿಸಲು 14 ದಿನ ಬೇಕಿತ್ತಾ?.. ರಾಜ್ಯ, ಕೇಂದ್ರಕ್ಕೆ ಸುಪ್ರೀಂ ತರಾಟೆ - ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆ

SC on Manipur violence: ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್​ ಗರಂ ಆಗಿದೆ.

SC on Manipur final  Sumit Saxena  Supreme Court on Manipur violence  Merely entrusting to CB  why take 14 days to register FIR  SC tough remarks on Manipur case  ಮಣಿಪುರ ಗಲಭೆ ಪ್ರಕರಣ  ಪ್ರಕರಣ ದಾಖಲಿಸಲು 14 ದಿನ ಏಕೆ ತೆಗೆದುಕೊಂಡಿದ್ದೀರಿ  ಕೇಂದ್ರಕ್ಕೆ ಸುಪ್ರೀಂ ತರಾಟೆ  ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರ  ವಿವಸ್ತ್ರಗೊಳಿಸಿ ಗ್ರಾಮದ ಸುತ್ತಲೂ ಓಡಿಸಿದ ಘಟನೆ  ಪೊಲೀಸರ ನಿರ್ಲಕ್ಷ್ಯ ವರ್ತನೆಗೆ ಸುಪ್ರೀಂ ಕೋರ್ಟ್ ಆಕ್ರೋಶ  ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ  ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆ  ಎಫ್‌ಐಆರ್ ದಾಖಲಿಸಲು ಇಷ್ಟು ದಿನ
ಪ್ರಕರಣ ದಾಖಲಿಸಲು 14 ದಿನ ಬೇಕಿತ್ತಾ?
author img

By

Published : Jul 31, 2023, 10:08 PM IST

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನ ಮೆರವಣಿಗೆ ಮಾಡಿದ ಘಟನೆ ಭಯಾನಕವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಘಟನೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಬಂಧನ ಸೇರಿದಂತೆ ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸುಪ್ರೀಂ ಅರ್ಜಿ ವಿಚಾರಣೆ ನಡೆಸಿದೆ. ಮಹಿಳೆಯರನ್ನು ಗಲಭೆಕೋರರಿಗೆ ಒಪ್ಪಿಸಿದ ಮಣಿಪುರ ಪೊಲೀಸರ ಕ್ರಮ ಒಪ್ಪುವಂತದ್ದಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ ಮತ್ತು ಮಣಿಪುರವನ್ನು ಪ್ರತಿನಿಧಿಸುವ ನ್ಯಾಯಾಂಗ ಅಧಿಕಾರಿಗಳ ವಾದವನ್ನು ಆಲಿಸಿದ ನಂತರ ಮಣಿಪುರದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಎಸ್‌ಐಟಿ ಅಥವಾ ಮಾಜಿ ನ್ಯಾಯಾಧೀಶರ ಸಮಿತಿಯನ್ನು ರಚಿಸುವ ಸಾಧ್ಯತೆಯಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಎಫ್‌ಐಆರ್ ದಾಖಲಿಸಲು ಇಷ್ಟು ದಿನ ಬೇಕಿತ್ತಾ? ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಇದುವರೆಗೆ ದಾಖಲಾಗಿರುವ ಎಫ್‌ಐಆರ್‌ಗಳ ಮೇಲೆ ಕೈಗೊಂಡ ಕ್ರಮಗಳನ್ನು ತಿಳಿಸುವಂತೆ ಆದೇಶಿಸಿದರು. ಮಹಿಳೆಯರನ್ನು ಸಶಸ್ತ್ರ ಗುಂಪುಗಳಿಗೆ ಹಸ್ತಾಂತರಿಸಿದ ಪೊಲೀಸರು ಪ್ರಕರಣದ ತನಿಖೆ ನಡೆಸುವುದು ನಮಗೆ ಇಷ್ಟವಿಲ್ಲ ಎಂದು ಸುಪ್ರೀಂ ನ್ಯಾಯಮೂರ್ತಿಗಳು ಹೇಳಿದ್ದಾರೆ. ಸಮಗ್ರ ತನಿಖೆಗಾಗಿ ವಿಶೇಷ ಸಮಿತಿ ಅಥವಾ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗುವುದು ಎಂದು ತಿಳಿಸಿ ಮುಂದಿನ ತನಿಖೆಯನ್ನು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿದರು.

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಕ ಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಪೊಲೀಸರ ವರ್ತನೆ ಬಗ್ಗೆ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳು ಸರಣಿ ಪ್ರಶ್ನೆಗಳನ್ನು ಕೇಳಿದರು.

ಪೊಲೀಸರು ಏನು ಮಾಡುತ್ತಿದ್ದಾರೆ?: ಮೇ 4ರಂದು ಈ ಅಪರಾಧ ನಡೆದಿದ್ದರೆ.. ಎಫ್‌ಐಆರ್ ದಾಖಲಿಸಲು (18ರಂದು) 14 ದಿನ ಏಕೆ ಬೇಕಾಯಿತು. ಇಲ್ಲಿಯವರೆಗೆ ಪೊಲೀಸರು (ಮಣಿಪುರ ಪೊಲೀಸರು) ಏನು ಮಾಡಿದ್ದಾರೆ?. ಒಂದು ತಿಂಗಳ ನಂತರ (ಜೂನ್ 24 ರಂದು) ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಏಕೆ ವರ್ಗಾಯಿಸಲಾಯಿತು?. ಈ ಘಟನೆ ಭಯಾನಕವಾಗಿದೆ. ಪೊಲೀಸರು ಸಂತ್ರಸ್ತ ಮಹಿಳೆಯರನ್ನು ಸಶಸ್ತ್ರ ಪಡೆಗಳ ಗುಂಪಿಗೆ ಒಪ್ಪಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. "ರಾಜ್ಯ ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುವುದನ್ನು ನಾವು ಬಯಸುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಹೇಳಿದ್ದಾರೆ.

ನ್ಯಾಯಾಲಯ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸ್ವಲ್ಪ ಕಾಲಾವಕಾಶ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಸಮಯ ಮೀರುತ್ತಿದ್ದು, ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತರಿಗೆ ತಕ್ಷಣದ ನ್ಯಾಯದ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಎರಡು ಸಮುದಾಯಗಳ ಹಿಂಸಾಚಾರದಿಂದ ಭುಗಿಲೆದ್ದಿರುವ ಮಣಿಪುರದಲ್ಲಿ ದಾಖಲಾದ ಎಫ್‌ಐಆರ್‌ಗಳ ಶೂನ್ಯ ಸಂಖ್ಯೆಯ ಹೊರತಾಗಿ, ಇದುವರೆಗೆ ಎಷ್ಟು ಜನರನ್ನು ಬಂಧಿಸಲಾಗಿದೆ ಎಂಬ ವಿವರವನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ಸಂತ್ರಸ್ತರಿಗೆ ಪುನರ್ವಸತಿ ಮತ್ತು ಪರಿಹಾರ ಪಾವತಿಗೆ ಸಂಬಂಧಿಸಿದ ವಿವರಗಳನ್ನು ನೀಡಬೇಕು ಎಂದೂ ಅದು ಸ್ಪಷ್ಟಪಡಿಸಿದೆ. ಸಂತ್ರಸ್ತ ಮಹಿಳೆಯರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವುದನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದರು. ಇಬ್ಬರು ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣವನ್ನು ಜುಲೈ 27 ರಂದು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮಹಿಳೆಯರ ಮೇಲಿನ ಅಪರಾಧಗಳನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ತೀರ್ಮಾನಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ಅತ್ಯಾಚಾರ ಸಂತ್ರಸ್ತರು ತಮಗೆ ಏನಾಯಿತು ಎಂಬುದನ್ನು ಅಷ್ಟು ಬೇಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ವಿವರಿಸಿದರು. ಸಿಬಿಐ ತನಿಖೆ ಆರಂಭವಾದರೆ ಮಹಿಳೆಯರು ಹೊರಗೆ ಬಂದು ಎಲ್ಲವನ್ನೂ ಹೇಳುತ್ತಾರೆ ಎಂಬ ನಂಬಿಕೆ ನನಗಿಲ್ಲ. ಈ ಘಟನೆಯ ಬಗ್ಗೆ ಪೊಲೀಸರು ಅಲ್ಲ, ಸಂತ್ರಸ್ತರೊಂದಿಗೆ ಮಹಿಳೆಯರು ಮಾತನಾಡಿದರೆ ಅನುಕೂಲವಾಗುತ್ತದೆ. ಅನುಭವಿ ಮಹಿಳೆಯರೊಂದಿಗೆ ಉನ್ನತ ಮಟ್ಟದ ಸಮಿತಿ ರಚಿಸಬೇಕು ಎಂದು ಅವರು ಒತ್ತಾಯಿಸಿದರು.

ಮತ್ತೊಂದೆಡೆ, ಗಸಗಸೆ ಕೃಷಿ, ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಮಣಿಪುರದಲ್ಲಿ ನಡೆದ ಗಲಭೆಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಈ ಅರ್ಜಿಯನ್ನು ಸ್ವೀಕರಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಇದು ಸಮುದಾಯದ ಮೇಲೆ ಆರೋಪ ಹೊರಿಸುತ್ತದೆ. ಇತ್ತೀಚಿನ ಹಿಂಸಾಚಾರಕ್ಕೆ ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಗಸಗಸೆ ಕೃಷಿಯೇ ಕಾರಣ ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮಾಧವಿ ದಿವಾನ್ ಪೀಠಕ್ಕೆ ತಿಳಿಸಿದರು.

ಜೂನ್ 20 ರಂದು, ಇಬ್ಬರು ಮಹಿಳೆಯರ ನಗ್ನ ಮೆರವಣಿಗೆಯ ಘಟನೆಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿತು. ಈ ಘಟನೆಯು ಆತಂಕಕ್ಕೆ ದೂಡಿದೆ ಮತ್ತು ಇಂತಹ ದಾಳಿಗಳು ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಈ ಘಟನೆಗೆ ಕೇಂದ್ರ ಸೂಕ್ತವಾಗಿ ಸ್ಪಂದಿಸದಿದ್ದರೆ ನ್ಯಾಯಾಲಯವೇ ಕ್ರಮ ತೆಗೆದುಕೊಳ್ಳಲಿದೆ ಎಂದು ಖಡಕ್​ ಎಚ್ಚರಿಕೆ ನೀಡಿದರು.

ಈ ಘಟನೆಯನ್ನು ಸುಪ್ರೀಂ ಕೋರ್ಟ್ ಸುಮೋಟೋ ಪ್ರಕರಣವೆಂದು ಸ್ವೀಕರಿಸಿದೆ. ಇಂತಹ ದುಷ್ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ತಿಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪೀಠ ಆದೇಶಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಸಂಪೂರ್ಣವಾಗಿ ಅಸಾಂವಿಧಾನಿಕ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಜುಲೈ 27 ರಂದು ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮಹಿಳೆಯರ ಮೇಲಿನ ಯಾವುದೇ ಅಪರಾಧವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದೆ. ಪ್ರಕರಣದ ವಿಚಾರಣೆಯನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಮಣಿಪುರದ ಹೊರಗೆ ವಿಚಾರಣೆಯನ್ನು ವರ್ಗಾಯಿಸಲು ಸುಪ್ರೀಂ ಕೋರ್ಟ್‌ಗೆ ಕೇಳಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ.

ಈ ವಿಚಾರದಲ್ಲಿ ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ ಎಂದ ಅವರು.. ಸುಪ್ರೀಂ ಕೋರ್ಟ್ ತನಿಖೆಯ ಮೇಲೆ ನಿಗಾ ವಹಿಸಲು ಕೇಂದ್ರ ಸರ್ಕಾರಕ್ಕೆ ಅಭ್ಯಂತರವಿಲ್ಲ. ಸರ್ಕಾರದ ಪ್ರತಿಕ್ರಿಯೆಯ ಮೇಲೆ ತನ್ನ ಮಧ್ಯಸ್ಥಿಕೆ ಅವಲಂಬಿತವಾಗಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಮಂಗಳವಾರ (ಆ.1) ಮಧ್ಯಾಹ್ನಕ್ಕೆ ಮುಂದೂಡಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್, ರಾಜ್ಯದ ಪರಿಸ್ಥಿತಿಯ ಮೇಲೆ ನಿಗಾ ಇಡಲು ವಿಶೇಷ ತನಿಖಾ ತಂಡ ಅಥವಾ ಮಾಜಿ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದೆ.

ಓದಿ: Manipur violence: ಮಣಿಪುರ ಮಹಿಳೆಯರ ಅವಮಾನಿಸಿದ ಘಟನೆ ಕ್ಷಮಿಸಲಾಗದ ತಪ್ಪು: ಸುಪ್ರೀಂ ಕೋರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.