ಮಹಾರಾಷ್ಟ್ರ/ಕೊಲ್ಹಾಪುರ: ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಮಹಾರಾಜರಿಗೆ ಕಪ್ಪು ಮಸಿ ಸುರಿದ ಘಟನೆ ವಿರೋಧಿಸಿ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡಿಗರ ಅಂಗಡಿಗಳನ್ನು ಉದ್ದೇಶ ಪೂರ್ವಕವಾಗಿ ಬಂದ್ ಮಾಡಿಸುವ ಜೊತೆಗೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬೆಳಗಾವಿಯ ಸಂಭಾಜಿ ಮಹಾರಾಜ ಚೌಕದಲ್ಲಿ ಜಮಾಯಿಸಿದ ಕಾರ್ಯಕರ್ತರು:
ಬೆಂಗಳೂರಿನಲ್ಲಿ ಕಿಡಿಗೇಡಿಗಳು ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದಿರುವುದನ್ನು ವಿರೋಧಿಸಿ, ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಮಹಾರಾಜ ಚೌಕದಲ್ಲಿ ಜಮಾಯಿಸಿ, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ಶಿವಾಜಿ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿದರು. ಬಳಿಕ ಕನ್ನಡಿಗರ ಹೋಟೆಲ್, ಅಂಗಡಿಗಳನ್ನು ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಬಂದ್ ಮಾಡಿಸಿದ್ದಾರೆ. ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಓದಿ: ಬೆಳಗಾವಿ ಗಲಭೆ: 27 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಕಳೆದ ಮೂರು ದಿನಗಳ ಹಿಂದೆ ಕೊಲ್ಹಾಪುರದಲ್ಲಿ ಕರ್ನಾಟಕದ ಕೆಂಪು ಮತ್ತು ಹಳದಿ ಧ್ವಜವನ್ನು ಸುಟ್ಟು ಕನ್ನಡಾಂಬೆಗೆ ಅವಮಾನ ಮಾಡಿದ್ದರು. ಈ ಬೆನ್ನಲ್ಲೇ ಇಂದು ನಸುಕಿಜಾವ 3 ಗಂಟೆ ಸುಮಾರಿಗೆ ಅನಗೋಳದ ಕನಕದಾಸ ಕಾಲೋನಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಕೆಡವಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್-ಶಿವಸೇನೆ ಕಾರ್ಯಕರ್ತರ ಉದ್ಧಟತನ ಮುಂದುವರೆದಿದ್ದು ಸೂಕ್ತ ಕೈಗೊಳ್ಳಬೇಕಿದೆ.
ಓದಿ: ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್, ಕನ್ನಡಿಗರ ವಾಹನಗಳ ಮೇಲೆ ಶಿವಸೇನೆ ಕಲ್ಲು ತೂರಾಟ - ವಿಡಿಯೋ