ತಿರುವನಂತಪುರಂ, ಕೇರಳ : 'ಮೆಟ್ರೋ ಮ್ಯಾನ್' ಎಂದು ಹೆಸರುವಾಸಿಯಾಗಿರುವ ಇ. ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಮಲಪ್ಪುರಂನಲ್ಲಿ ನಡೆದ ಬಿಜೆಪಿ ಯಾತ್ರೆಯಲ್ಲಿ ಸೇರ್ಪಡೆಗೊಂಡಿದ್ದಾರೆ.
ಈ ವೇಳೆ ಮಾತನಾಡಿರುವ ಶ್ರೀಧರನ್, ಬಿಜೆಪಿ ಸೇರ್ಪಡೆಯಾಗುವ ನನ್ನ ನಿರ್ಧಾರ ನಮ್ಮ ಜೀವನದ ಹೊಸ ಘಟ್ಟ. ನಾನು ಕೇರಳಕ್ಕೆ ಏನಾದರೂ ಮಾಡಬೇಕೆಂದು ಅಂದುಕೊಂಡಿದ್ದೇನೆ. ಬಿಜೆಪಿ ಸೇರ್ಪಡೆಯಾಗಿರುವುದು ನನ್ನ ಉತ್ತಮ ಆಯ್ಕೆ ಎಂದು ಪಕ್ಷಕ್ಕೆ ಸೇರ್ಪಡೆ ವೇಳೆ ನಡೆಯುತ್ತಿದ್ದ ರ್ಯಾಲಿಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮುಖೇಶ್ ಅಂಬಾನಿ ಮನೆ ಬಳಿ ಪತ್ತೆಯಾಗಿದ್ದ ಸ್ಫೋಟಕಯುಕ್ತ ವಾಹನ : ಎಫ್‌ಐಆರ್ ದಾಖಲು
88 ವರ್ಷದ ಇವರು ಕೇರಳದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಚಿರಪರಿಚಿತರಾಗಿದ್ದಾರೆ. ಹಿಂದಿನ ವಾರ ಬಿಜೆಪಿ ಸೇರ್ಪಡೆ ಬಗ್ಗೆ ಮಾಹಿತಿ ಹೊರ ಹಾಕಿದ್ದು, ಈಗ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಿದ್ದಾರೆ.
ಇವರು 1995 ರಿಂದ 2012ರ ವರೆಗೆ ದೆಹಲಿ ಮೆಟ್ರೋದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ, ಕೊಂಕಣ ರೈಲ್ವೆಯ ಕನಸನ್ನು ಸಾಕಾರಗೊಳಿಸಿದವರು ಇವರೇ. ಇವರಿಗೆ 2001ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಹಾಗೂ 2008ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.