ETV Bharat / bharat

ಮಹಾರಾಷ್ಟ್ರದ ಕೊಲ್ಲಾಪುರ ಸೇರಿ ಮೂರು ಜಿಲ್ಲೆಯಲ್ಲಿ 3.4 ತೀವ್ರತೆ ಭೂಕಂಪ: ಯಾವುದೇ ಪ್ರಾಣ ಹಾನಿ ಇಲ್ಲ - ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ

Maharashtra Earthquake: ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಮತ್ತು ಸತಾರಾ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಗ್ಗೆ ಭೂಕಂಪ ಸಂಭವಿಸಿದೆ. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿದೆ. ಈ ಸಯಮದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾಗಿಲ್ಲ.

Maharashtra Earthquake
ಮಹಾರಾಷ್ಟ್ರದ ಕೊಲ್ಲಾಪುರ ಸೇರಿ ಮೂರು ಜಿಲ್ಲೆಯಲ್ಲಿ 3.4 ತೀವ್ರತೆ ಭೂಕಂಪ: ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ
author img

By

Published : Aug 16, 2023, 11:16 AM IST

ಕೊಲ್ಲಾಪುರ (ಮಹಾರಾಷ್ಟ್ರ): ಕೊಲ್ಲಾಪುರ ಸೇರಿದಂತೆ ಸಾಂಗ್ಲಿ, ಸತಾರಾ ಜಿಲ್ಲೆಯಲ್ಲಿ ಇಂದು (ಬುಧವಾರ) ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟಿನಿಂದ ಕೇವಲ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿದೆ. ನಾಗರಿಕರು ಭಯಭೀತರಾಗಿದ್ದಾರೆ. ಭೂಕಂಪ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರ ಬಿಂದು ನೆಲದಿಂದ 5 ಕಿಮೀ ಆಳದಲ್ಲಿ ಇದೆ. ಕೊಲ್ಹಾಪುರದಿಂದ 76 ಕಿಮೀ ದೂರದಲ್ಲಿರುವ ಚಂದೋಲಿ ಅಭಯಾರಣ್ಯ ಪ್ರದೇಶದಲ್ಲಿ ಭೂಕಂಪದ ಅನುಭವವಾಗಿದೆ.

ನಾಗರಿಕರಲ್ಲಿ ಭಯದ ವಾತಾವರಣ: ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟು ಮತ್ತು ಅಭಯಾರಣ್ಯ ಪ್ರದೇಶದಲ್ಲಿ ಈ ಭೂಕಂಪನದ ಅನುಭವವಾಗಿದೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜಿಲ್ಲೆಯ ಪಟಾನ್ ನಗರದಲ್ಲಿ ಹಾಗೂ ಸಮೀಪದ ಗ್ರಾಮಗಳಲ್ಲಿ ಬೆಳಗ್ಗೆ 6.40ಕ್ಕೆ ಭೂಮಿ ನಡುಗಿದೆ. ಬೆಳಗಿನ ವಾಕಿಂಗ್‌ಗೆ ತೆರಳಿದ್ದ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಕೊಯ್ನಾ ಡ್ಯಾಂ ಸಮೀಪದಲ್ಲಿ ಲಘು ಭೂಕಂಪನ: ಕೊಯ್ನಾ ಅಣೆಕಟ್ಟಿನಿಂದ 20 ಕಿಮೀ ದೂರದಲ್ಲಿ ಭೂಕಂಪನದ ಅನುಭವವಾಗಿದ್ದು, ಅಣೆಕಟ್ಟು ಸುರಕ್ಷಿತವಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೊಲ್ಹಾಪುರ ಸತಾರಾ ಸೇರಿದಂತೆ ಸಾಂಗ್ಲಿ ಜಿಲ್ಲೆಯ ಶಿರಾಲಾ ತಾಲೂಕಿನ ಚಂದೋಲಿ ಅಭಯಾರಣ್ಯ ಪ್ರದೇಶದಿಂದ 15 ಕಿಮೀ ವ್ಯಾಪ್ತಿಯಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 3.2ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ಬೆಳಗ್ಗೆ 6.55ಕ್ಕೆ ಭೂಮಿ ಕಂಪಿಸಿದ ಅನುಭವವಾಯಿತು.

ಇತ್ತೀಚೆಗೆ ಸಿಂಧುದುರ್ಗದಲ್ಲಿ ಭೂಕಂಪ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲೂ ಕಳೆದ ತಿಂಗಳು ಭೂಕಂಪನದ ಅನುಭವವಾಗಿತ್ತು. ಜುಲೈ 29 ರಂದು ಸಾವಂತವಾಡಿ ತಾಲೂಕಿನಲ್ಲಿ ಭೂಕಂಪನ ಸಂಭವಿಸಿತ್ತು. ಮಡ್ಖೋಲ್, ಕಲಂಬಿಸ್ಟ್, ಸರ್ಮಲೆ, ಒಟ್ವಾನೆ, ಕರಿವಾಡೆ, ಕೊಂಶಿ, ಭಲಾವಲ್, ಓವಲಿಯೆ, ಧ್ವಡ್ಕಿ, ವಿಲವೆಡೆ ಮತ್ತಿತರ ಗ್ರಾಮಗಳಲ್ಲಿ ಭಾರಿ ಶಬ್ದ ಹಾಗೂ ಲಘು ಕಂಪನದ ಅನುಭವವಾಗಿತ್ತು. ಆ ವೇಳೆ ನೆಲವೂ ನಡುಗಿತ್ತು. ಆದರೆ, ಈ ಭೂಕಂಪದಲ್ಲಿ ಯಾವುದೇ ಹಾನಿ ವರದಿಯಾಗಿಲ್ಲ.

ನಂದೂರ್ಬಾರ್ ಜಿಲ್ಲೆಯಲ್ಲಿ ಸಂಭವಿಸಿತ್ತು ಭೂಕಂಪ: ಫೆಬ್ರವರಿ ತಿಂಗಳಲ್ಲೂ ನಂದೂರ್ಬಾರ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಲಘು ಭೂಕಂಪನದ ಅನುಭವವಾಗಿತ್ತು. ಆ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.8ರಷ್ಟು ದಾಖಲಾಗಿತ್ತು. ಇದಕ್ಕೂ ಮುನ್ನ, ಜನವರಿ 2, 2021 ರಂದು ರಿಕ್ಟರ್ ಮಾಪಕದಲ್ಲಿ 4.4ರ ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಜನವರಿ 24 ರಂದು 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಕೇದಾರನಾಥನ ದರ್ಶನಕ್ಕೆ ತೆರಳಿದ್ದ ಭದ್ರಾವತಿಯ ನಾಲ್ವರು ಸುರಕ್ಷಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.