ETV Bharat / bharat

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರು ಆರೋಪಿಗಳ ಬಂಧನ - ಆರು ಆರೋಪಿಗಳ ಬಂಧನ

15 ವರ್ಷದ ಬಾಲಕಿಯ ಮೇಲೆ ಚಾಕುವಿನಿಂದ ಬೆದರಿಸಿ ಬಲವಂತವಾಗಿ ಅತ್ಯಾಚಾರ ನಡೆಸಿದ ಕ್ರೂರಿಗಳು - ತಡವಾಗಿ ಬೆಳಕಿಗೆ ಬಂದ ಘಟನೆ- ಆರು ಆರೋಪಿಗಳನ್ನು ಬಂಧಿಸಿದ ಪೊಲೀಸರು.

MH Gang rape of a minor girl in Pune  Six persons detained
ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಚಾರ, 6 ಆರೋಪಿಗಳ ಬಂಧನ
author img

By

Published : Dec 28, 2022, 3:31 PM IST

ಪುಣೆ(ಮಹಾರಾಷ್ಟ್ರ): ಪುಣೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಯ ಮೇಲೆ ಜುಲೈ ಮತ್ತು ಡಿಸೆಂಬರ್ 23, 2022ರ ವರೆಗೂ ನಿರಂತರವಾಗಿ ಅತ್ಯಾಚಾರ ನಡೆದಿದೆ ಎಂದು ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ಅಪ್ರಾಪ್ತ ವಯಸ್ಕಳು ಎಂದು ತಿಳಿದಿದ್ದರೂ ಆರೋಪಿಗಳಲ್ಲಿ ಒಬ್ಬನು ಚಾಕುವಿನಿಂದ ಬೆದರಿಸಿ ಅವಳೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ನಂತರ ಇತರ ಆರೋಪಿಗಳು ಆಕೆಯ ಫೋಟೋ ತೆಗೆದು ವೈರಲ್ ಮಾಡುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ.

ಬಾಲಕಿಯು ಲೈಂಗಿಕ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ ನಂತರ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಚತುಶ್ರಿಂಗಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಹದಿಹರೆಯದ ಬಾಲಕಿ ಕತ್ತು ಸೀಳಿ ಕೊಲೆ: ಪ್ರಿಯಕರ ಪೊಲೀಸ್​ ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.