ಪುಣೆ(ಮಹಾರಾಷ್ಟ್ರ): ಪುಣೆಯ ಫರ್ಸುಂಗಿಯಲ್ಲಿ ಅಸಹ್ಯಕರ ಘಟನೆಯೊಂದು ಬೆಳಕಿಗೆ ಬಂದಿದೆ. 16 ವರ್ಷದ ಬಾಲಕ ಹಸುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಫರ್ಸುಂಗಿ ಗ್ರಾಮದ ಬಾಲಕ ಬಯಲಿನಲ್ಲಿ ಹಸುವಿನ ಕಾಲುಗಳನ್ನು ಕಟ್ಟಿಹಾಕಿ ಹಸುವಿನ ಜೊತೆ ಅಸಹಜ ಕ್ರಿಯೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಪುಣೆಯ ಹದಪ್ಸರ್ ಪೊಲೀಸ್ ಠಾಣೆಯಲ್ಲಿ ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ಮತ್ತು ಪ್ರಾಣಿ ಹಿಂಸೆ ಪ್ರಕರಣ ದಾಖಲಿಸಿ ಹಸುವಿನ ಮೇಲೆ ಅತ್ಯಾಚಾರವೆಸಗಿದ್ದ 16 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಈ ಅಘಾತಕಾರಿ ಘಟನೆಯಿಂದಾಗಿ ಸಾಮಾನ್ಯ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂಓದಿ: ಚಲಿಸುತ್ತಿದ್ದ ಕಾರಿಗೆ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಚಾಲಕ