ಮುಂಬೈ: ಕಾರ್ಡೆಲಿಯಾ ಕ್ರೂಸ್ ಡ್ರಗ್ ಬೆಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಸಿಲುಕಿಸದಿರಲು ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರಿಂದ 25 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಎನ್‌ಸಿಬಿ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಬಂಧನಕ್ಕೆ ಬಲವಂತದ ಕ್ರಮ ಕೈಗೊಳ್ಳದಂತೆ ಮುಂಬೈ ಹೈಕೋರ್ಟ್ ಶುಕ್ರವಾರ ಸಿಬಿಐಗೆ ನಿರ್ದೇಶನ ನೀಡಿದೆ.
ಆರ್ಯನ್ ಖಾನ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮಾಜಿ ಝೋನಲ್ ಡೈರೆಕ್ಟರ್ ಸಮೀರ್ ವಾಂಖೇಡೆ ಅವರು ಬಾಂಬೆ ಹೈಕೋರ್ಟ್ ನಿಂದ ರಿಲೀಫ್ ಪಡೆದಿದ್ದಾರೆ. ವಾಂಖೆಡೆ ವಿರುದ್ಧ ಮೇ 22 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸಿಬಿಐಗೆ ಹೈಕೋರ್ಟ್ ಸೂಚಿಸಿದೆ.
ಮಾದಕ ವಸ್ತು ದಂಧೆ ಪ್ರಕರಣದಲ್ಲಿ ತನ್ನ ಪುತ್ರ ಆರ್ಯನ್ ಖಾನ್ ನನ್ನು ಸಿಲುಕಿಸದಂತೆ ಬಾಲಿವುಡ್ ನಟ ಶಾರುಖ್ ಖಾನ್ 25 ಕೋಟಿ ರೂ.ಗೆ ಬೇಡಿಕೆ ಇಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುಳಿದ ಸಮುದಾಯಕ್ಕೆ ಸೇರಿದ ಸಮೀರ್ ವಾಂಖೆಡೆ ಅವರನ್ನು ಸಿಬಿಐ ಗುರುವಾರ ವಿಚಾರಣೆಗೆ ಕರೆದಿತ್ತು. ಆದರೆ, ವಾಂಖೆಡೆ ವಿಚಾರಣೆಗೆ ಹಾಜರಾಗಿರಲಿಲ್ಲ.
ಮೇ 20 ರಂದು ಬೆಳಗ್ಗೆ 11 ಗಂಟೆಗೆ ಮುಂಬೈನ ಬಿಕೆಸಿ ಪ್ರದೇಶದಲ್ಲಿರುವ ಸಿಬಿಐ ಕಚೇರಿಗೆ ಹಾಜರಾಗುವುದಾಗಿ ವಾಂಖೆಡೆ ಅವರ ಅಫಿಡವಿಟ್ ದಾಖಲಿಸಿದ ನಂತರ ಹೈಕೋರ್ಟ್‌ನ ರಜಾಕಾಲದ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಮೇ 22ರವರೆಗೆ ವಾಂಖೆಡೆ ವಿರುದ್ಧ ಸಿಬಿಐ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಕಾರ್ಡೆಲಿಯಾ ಕ್ರೂಸ್ ಡ್ರಗ್ ಬೇಸ್ಟ್ ಪ್ರಕರಣ: 3 ಅಕ್ಟೋಬರ್ 2021 ರಂದು, ಮುಂಬೈನಿಂದ ಗೋವಾಕ್ಕೆ ಹೋಗುತ್ತಿದ್ದ ಕಾರ್ಡೆಲಿಯಾ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಅವರನ್ನು ಬಂಧಿಸಲಾಯಿತು. ಆರ್ಯನ್ ವಿರುದ್ಧದ ಆರೋಪಗಳನ್ನು ಸಮರ್ಪಕ ಸಾಬೀತುಪಡಿಸಲು ಎನ್‌ಸಿಬಿಗೆ ಸಾಕಷ್ಟು ಪುರಾವೆಗಳು ಸಿಗದಿದ್ದರಿಂದ ಮೂರು ವಾರಗಳ ನಂತರ, ಬಾಂಬೆ ಹೈಕೋರ್ಟ್ ಆರ್ಯನ್‌ಗೆ ಜಾಮೀನು ನೀಡಿತು. ಸಿಬಿಐವೂ ಎನ್‌ಸಿಬಿ ನೀಡಿದ ದೂರಿನ ಮೇರೆಗೆ ವಾಂಖೆಡೆ ಸೇರಿದಂತೆ ಇತರರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.
2021ರ ಅಕ್ಟೋಬರ್ 2ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದ ಎನ್‌ಸಿಬಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ, ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ)ಯು ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿದೆ.
ಮತ್ತೊಂದೆಡೆ, ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರರು ಸೇರಿಕೊಂಡು ಈ ಮಾದಕ ದ್ರವ್ಯ ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ, ವಾಂಖೆಡೆ ಮತ್ತು ಆತನ ಸಹಚರರಿಂದ ಮುಂಗಡ 50 ಲಕ್ಷ ರೂಪಾಯಿ ಪಡೆದಿರುವ ಮಾಹಿತಿ ಸಿಬಿಐಗೆ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಆಧಾರದ ಮೇಲೆ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಸಿಬಿಐ ಕೇಸ್ ದಾಖಲಿಸಿಕೊಂಡಿದೆ. ಈ ಸಂಬಂಧ ಮುಂಬೈ, ದೆಹಲಿ, ಜಾರ್ಖಂಡ್ನ ರಾಂಚಿ ಮತ್ತು ಉತ್ತರ ಪ್ರದೇಶದ ಕಾನ್ಪುರ ಸೇರಿದಂತೆ 29 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಆರ್ಯನ್ ಖಾನ್ ಬಂಧನದ ವೇಳೆ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಖ್ಯಸ್ಥರಾಗಿದ್ದ ಸಮೀರ್ ವಾಂಖೆಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಮೇ ತಿಂಗಳಲ್ಲಿ ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾ ನಿರ್ದೇಶನಾಲಯಕ್ಕೆ ಅವರನ್ನು ವರ್ಗಾಯಿಸಲಾಗಿತ್ತು.
ಇದನ್ನೂಓದಿ:2000 ರೂ. ನೋಟ್ ಹಿಂಪಡೆದುಕೊಂಡ ಆರ್ಬಿಐ... ನೋಟು ಇದ್ದವರು ಹೀಗೆ ಮಾಡಿ...! ಭಯಬೇಡ - ಆರ್ಬಿಐ ಅಭಯ