ನವದೆಹಲಿ: ವಿರೋಧ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಚುನಾವಣಾ ಫಲಿತಾಂಶದ ನಂತರ ನಡೆದ ಹಿಂಸಾಚಾರದ ಬಗ್ಗೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ಸೋಮವಾರ ವರದಿ ಕೇಳಿದೆ.
ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿಜಯಶಾಲಿಯಾಗಿರುವ 292 (2 ಕ್ಷೇತ್ರಗಳ ಚುನಾವಣೆ ಮುಂದೂಡಿಕೆ) ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಫಲಿತಾಂಶ ಪ್ರಕಟವಾದಾಗಿನಿಂದ ಬಿಜೆಪಿ ಸೇರಿದಂತೆ ರಾಜಕೀಯ ಕಾರ್ಯಕರ್ತರನ್ನು ವಿರೋಧಿಗಳು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
"ರಾಜ್ಯದ ವಿರೋಧ ಪಕ್ಷದ ರಾಜಕೀಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಚುನಾವಣಾ ನಂತರದ ಹಿಂಸಾಚಾರದ ಬಗ್ಗೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿದೆ" ಎಂದು ವಕ್ತಾರರು ಟ್ವೀಟ್ ಮಾಡಿದ್ದಾರೆ.
ಹೂಗ್ಲಿ ಜಿಲ್ಲೆಯ ತನ್ನ ಪಕ್ಷದ ಒಂದು ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರಲ್ಲಿ ಶಾಂತಿ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಮತ್ತು ಪ್ರಚೋದನೆಗಳಿಗೆ ಬಲಿಯಾಗದಂತೆ ಕೇಳಿಕೊಂಡಿದ್ದಾರೆ.