ಬಾರ್ಮರ್(ರಾಜಸ್ಥಾನ): ಭಾರತೀಯ ವಾಯುಪಡೆಗೆ ಸೇರಿದ ಮಿಗ್ -21 ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಹೊತ್ತಿ ಉರಿದಿದೆ. ಇದರಲ್ಲಿದ್ದ ಪೈಲಟ್ಗಳು ಸಾವನ್ನಪ್ಪಿದ್ದಾರೆ.
ವಿಮಾನ ಪತನಗೊಂಡ ಬೆನ್ನಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ಅದು ಸುಮಾರು ಒಂದು ಕಿಲೋ ಮೀಟರ್ ದೂರದವರೆಗೂ ಅದರ ಅವಶೇಷಗಳು ಹರಡಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದರು.
ಮೂಲಗಳ ಪ್ರಕಾರ ವಿಮಾನದಲ್ಲಿ ಇಬ್ಬರು ಪೈಲಟ್ಗಳು ಇದ್ದರು. ಇನ್ನೂ ಅಪಘಾತಕ್ಕೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.