ಎರ್ನಾಕುಲಂ (ಕೊಚ್ಚಿ): ಇಲ್ಲಿನ ಕಿಜಕ್ಕಂಬಲಂನಲ್ಲಿ ಅಂತಾರಾಜ್ಯ ಕಾರ್ಮಿಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕುನ್ನತ್ತುನಾಡು ಸರ್ಕಲ್ ಇನ್ಸ್ಪೆಕ್ಟರ್ ಶಾಜನ್ ಸೇರಿದಂತೆ ಐವರು ಪೊಲೀಸರು ಗಾಯಗೊಂಡಿದ್ದಾರೆ.
ಕಿಟೆಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಎರಡು ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಕ್ರಿಸ್‌ಮಸ್ ಆಚರಣೆ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕಾರ್ಮಿಕರ ನಡುವೆ ಘರ್ಷಣೆ ನಡೆದಿದೆ. ಈ ಸಮಸ್ಯೆ ಬಗೆಹರಿಸಲು ಮುಂದಾದ ಪೊಲೀಸರ ಮೇಲೆ ಕಾರ್ಮಿಕರು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಕುಡಿದ ಮತ್ತಿನಲ್ಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು, ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲುವಾ ಗ್ರಾಮಾಂತರ ಎಸ್ಪಿ ಕಾರ್ತಿಕ್ ನೇತೃತ್ವದಲ್ಲಿ ಸುಮಾರು 500 ಪೊಲೀಸರು ಸ್ಥಳಕ್ಕೆ ಧಾವಿಸಿ, 150ಕ್ಕೂ ಕಾರ್ಮಿಕರನ್ನು ಬಂಧಿಸಿದ್ದಾರೆ. ಸದ್ಯ ಘರ್ಷಣೆ ನಡೆದ ಕಿಜಕ್ಕಂಬಲಂನಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ ಮಗಳ ಅಂಗಾಂಗ ದಾನ : 9 ಮಂದಿಗೆ ಹೊಸ ಬಾಳು ನೀಡಿದ ಎರಡೂವರೆ ವರ್ಷದ ಬಾಲಕಿ